Saturday, July 2, 2022

Latest Posts

ದ.ಕ.ದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 151 ಏರಿಕೆ: ಮತ್ತೆ ಎಂಟು ಮಂದಿಗೆ ಕೊರೋನಾ ಸೋಂಕು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ ಎಂಟು ಮಂದಿಯಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದ್ದು, ಈ ಮೂಲಕ ಜಿಲ್ಲೆಯಲ್ಲೆ ಕೊರೋನಾ ಸೋಂಕಿತರ ಸಂಖ್ಯೆ 151ಕ್ಕೆ ಎರಿಕೆಯಾಗಿದೆ.
ಸೋಂಕಿತ ಎಂಟು ಮಂದಿಯಲ್ಲಿ ಏಳು ಮಂದಿ ಮಹಾರಾಷ್ಟ್ರದಿಂದ ಆಗಮಿಸಿದವರಾಗಿದ್ದಾರೆ. ಇನ್ನೊಬ್ಬರು 60 ವರ್ಷದ ಮಹಿಳೆಯಾಗಿದ್ದು, ಇವರಿಗೆ ಹೇಗೆ ಸೋಂಕು ತಗುಲಿದೆ ಎಂದು ಸೋಂಕಿನ ಮೂಲವನ್ನು ಪತ್ತೆ ಹಚ್ಚಲಾಗುತ್ತಿದೆ. ಜಿಲ್ಲೆಯಲ್ಲಿ ಗುರುವಾರ ನಾಲ್ಕು ಮಂದಿಯಲ್ಲಿ ಸೋಂಕು ಪತ್ತೆಯಾಗಿತ್ತು.
ಕೊರೋನಾ ಪಾಸಿಟಿವ್ ಕಂಡುಬಂದ ಏಳು ಮಂದಿ ಕೂಡ ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್‌ನಲ್ಲಿದ್ದರು. ಇದೀಗ ಸೋಂಕು ದೃಢವಾಗಿರುವುದರಿಂದ ಕೋವಿಡ್ ಆಸ್ಪತ್ರೆಯಾದ ವೆನ್ಲಾಕ್‌ಗೆ ದಾಖಲಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss