ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಎರಡು ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಪ್ರಕರಣದೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 224 ಪಾಸಿಟಿವ್ ಪ್ರಕರಣಗಳು ಪತ್ತೆಯಾದಂತಾಗಿದೆ.
ಗುರುವಾರ ಪತ್ತೆಯಾದ ಪ್ರಕರಣದಲ್ಲಿ ಒಬ್ಬರು ಮಹಾರಾಷ್ಟ್ರದಿಂದ ಬಂದವರಾಗಿದ್ದು,ಇನ್ನೊಬ್ಬರಿಗೆ ರೋಗಿ ಸಂಖ್ಯೆ4186ರಿಂದ ಸೋಂಕು ತಗುಲಿದೆ. ಬುಧವಾರ ಜಿಲ್ಲೆಯಲ್ಲಿ 4ಮಂದಿಯಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿತ್ತು.