Sunday, August 14, 2022

Latest Posts

ಧಾರವಾಡಕ್ಕೂ ಕಾಡಿದ ಮಹಾರಾಷ್ಟ್ರದ ಭಯ: ನಾಲ್ಕು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ

ಧಾರವಾಡ: ಜಿಲ್ಲೆಯಲ್ಲಿ ಭಾನುವಾರ ನಾಲ್ಕು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.
ಪಿ-1123 (39,ಪುರುಷ) ಮಹಾರಾಷ್ಟ್ರದ ಮುಂಬೈ ಪ್ರಯಾಣ ಹಿನ್ನೆಲೆ, ಪಿ-1124( 16, ಬಾಲಕ) ಇವರು ಪಿ-589 ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದರು. ಪಿ-1142 ( 28, ಮಹಿಳೆ) ಮಹಾರಾಷ್ಟ್ರ, ಮುಂಬೈ ಪ್ರಯಾಣ ಹಿನ್ನೆಲೆ, ಪಿ-1143 ( 25, ಪುರುಷ) ಮಹಾರಾಷ್ಟ್ರದ ಕೊಲ್ಹಾಪುರ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಈಗಾಗಲೇ 7 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರು ಹುಬ್ಬಳ್ಳಿ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss