ಧಾರವಾಡ: ನಿರಂತರ ಸುರಿದ ಮಳೆಯಿಂದ ಮನೆಯ ಗೋಡೆ ಕುಸಿದ ಪರಿಣಾಮ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಬೋಗೂರು ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.
ಬೋಗೂರು ಗ್ರಾಮದ ವಿಶ್ವನಾಥ ಕುರಿ(2), ಯಲ್ಲಪ್ಪ ಕುರಿ(4) ಗಾಯಗೊಂಡ ಮಕ್ಕಳು. ವಿಶ್ವನಾಥನನ್ನು ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲಿಸಿದರೆ, ಯಲ್ಲಪ್ಪನನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಜಿಲ್ಲೆಯಲ್ಲಿ ಕಳೆದ ಐದು ದಿನಗಳಿಂದ ನಿರಂತರ ಸುರಿಯುವ ಮಳೆಯಿಂದ ಮನೆಯ ಗೋಡೆ ನೀರಿಗೆ ನೆನೆದ ಪರಿಣಾಮ ರಾತ್ರಿ ಮಕ್ಕಳು ಮಲಗಿದಾಗ ಗೋಡೆ ಕುಸಿದು ಈ ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಸ್ಥಳೀಯ ಅಧಿಕಾರಿಗಳು ಭೇಟಿನೀಡಿ ಪರಿಶೀಲಿಸಿದ್ದಾರೆ.