ಧಾರವಾಡ: ಸಾರಿಗೆ ಸಂಸ್ಥೆ ಬಸ್ ಪಲ್ಟಿ ಹೊಡೆದು 10ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಧಾರವಾಡದ ಯರಿಕೊಪ್ಪ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ಬೆಳಗಾವಿ ಕಡೆ ಹೊರಟಿದ್ದ ಬಸ್ ಪಲ್ಟಿಯಾಗಿದ್ದು, ಅದರಲ್ಲಿದ್ದ ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.