Thursday, August 18, 2022

Latest Posts

ಧಾರವಾಡ| ಐದು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆ

ಧಾರವಾಡ: ಶೈಕ್ಷಣಿಕ ನಗರಿ ಧಾರವಾಡ ಜಿಲ್ಲೆಯಲ್ಲಿ ಗುರುವಾರ ಐದು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.

ಪಿ.1505 (6-ಬಾಲಕಿ) ಹಾಗೂ ಪಿ.1506( 29-ಮಹಿಳೆ) ಇವರಿಬ್ಬರು ತೆಲಂಗಾಣದ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ. ಪಿ.1507 (9-ಬಾಲಕಿ), ಪಿ.1508 (24-ಮಹಿಳೆ), ಪಿ-1509( 35-ಪುರುಷ)  ಈ ಮೂವರು ವ್ಯಕ್ತಿಗಳು ಮಹಾರಾಷ್ಟ್ರ, ಮುಂಬೈ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ.

ಇದರಿಂದ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. 9 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ . ಉಳಿದವರು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!