Wednesday, August 17, 2022

Latest Posts

ಧಾರವಾಡ| ಒಂದು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ

ಧಾರವಾಡ: ದಿನೇ ದಿನೇ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು, ಧಾರವಾಡದ ಜಿಲ್ಲೆಯಲ್ಲಿ ಶನಿವಾರವೂ ಕೂಡ ಒಂದು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.

ಪಿ.1913 (51-ಪುರುಷ) ಮಹಾರಾಷ್ಟ್ರ ರಾಜ್ಯದಿಂದ ಹಿಂದಿರುಗಿದ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ. ಜಿಲ್ಲೆಗೆ ಬಂದ ಕೂಡಲೇ ಗಂಟಲು ದ್ರವ ಪರೀಕ್ಷೆಗೊಳಪಡಿಸಿ, ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು.

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಈಗಾಗಲೇ 9 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಳಿದವರು ಹುಬ್ಬಳ್ಳಿ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!