ಧಾರವಾಡ: ಕಾರು ಹಾಗೂ ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಸಲಕಿನಕೊಪ್ಪ ಗ್ರಾಮದ ಬಳಿ ಸಂಭವಿಸಿದೆ. ಗಾಯಗೊಂಡವರ ಹೆಸರು ತಿಳಿದಬಂದಿಲ್ಲ.
ದಾಂಡೇಲಿಯಿoದ ಧಾರವಾಡ ಕಡೆ ಬರುತ್ತಿದ್ದ ಕಾರಿಗೆ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದಿದೆ. ಗಾಯಾಳು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿದೆ. ಈ ಬಗ್ಗೆ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ದೂರು ದಾಖಲಾಗಿದೆ.