Wednesday, August 17, 2022

Latest Posts

ಧಾರವಾಡ| ಕೋವಿಡ್-19: ಇಬ್ಬರು ಗುಣಮುಖ-ಬಿಡುಗಡೆ

ಧಾರವಾಡ: ಕೊರೋನಾ ವೈರಸ್ ಸೋಂಕಿತ ಇಬ್ಬರು ಗುಣಮುಖರಾಗಿ ಹುಬ್ಬಳ್ಳಿಯ ಕಿಮ್ಸ್ ನಿಂದ ಮಂಗಳವಾರ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದ ಹುಬ್ಬಳ್ಳಿ ಮುಲ್ಲಾ ಓಣಿಯ ಪಿ- 430 (30 ವರ್ಷ, ಮಹಿಳೆ) ಹಾಗೂ ಆಝಾದ್ ಕಾಲನಿಯ ಪಿ-431( 13 ವರ್ಷ,ಬಾಲಕಿ) ಇವರು ಸಂಪೂರ್ಣ ಗುಣಮುಖರಾಗಿದ್ದಾರೆ.

24 ಗಂಟೆಗಳಲ್ಲಿ ಎರಡು ಬಾರಿ ಅವರು ಗಂಟಲು ದ್ರವ ಪರೀಕ್ಷೆ ಮಾಡಿದಾಗ ನೆಗೆಟಿವ್ ವರದಿ ಬಂದಿದೆ. ಎಕ್ಸ್ ರೇ ಮೂಲಕ ಪರೀಕ್ಷಿಸಿದಠಗ ಶ್ವಾಸಕೋಶದ ತೊಂದರೆ ಇಲ್ಲವೆಂದು ವೈದ್ಯರು ದೃಢಪಡಿಸಿದ್ದರಿಂದ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಜಿಲ್ಲೆಯಲ್ಲಿ ಇದುವರೆಗೆ 09 ಜನ ಕೋವಿಡ್ ನಿಂದ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, ಸದ್ಯ ಜಿಲ್ಲೆಯ 17 ಜನ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!