Wednesday, August 10, 2022

Latest Posts

ಧಾರವಾಡ ಜಿಲ್ಲೆಯಲ್ಲಿ ಎರಡು ಕೊರೋನಾ ಪಾಸಿಟಿವ್ ದೃಢ: ಓರ್ವ ಗುಣಮುಖ

ಧಾರವಾಡ: ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮುಂದುವರೆಸಿದ್ದು, ಗುರುವಾರವೂ ಎರಡು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಈ ಕುರಿತು ಪ್ರಕಟಣೆ ತಿಳಿಸಿದ  ಜಿಲ್ಲಾಧಿಕಾರಿ ದೀಪಾ ಚೋಳನ್, ಸೋಂಕಿತರನ್ನು ಪಿ-6222 (59-ಪುರುಷ) ಇವರು ನವಲಗುಂದ ತಾಲ್ಲೂಕಿನ ಮೊರಬ ಗ್ರಾಮದ ನಿವಾಸಿ. ಸೋಂಕಿನ ಸಂಪರ್ಕ ಪತ್ತೆ ಮಾಡಲಾಗುತ್ತಿದೆ. ಪಿ- 6245 (34-ಪುರುಷ) ಇವರು ಬೆಂಗಳೂರಿನಿಂದ ಆಗಮಿಸಿದ ವ್ಯಕ್ತಿ. ಸಂಪರ್ಕ ಪತ್ತೆ ಮಾಡಲಾಗುತ್ತಿದೆ.
ಓರ್ವ ಗುಣ
ಕೋವಿಡ್ ನಿಂದ ಗುಣವಾದ ಪಿ -3913 (54-ಪುರುಷ) ಜೂ. 10 ರಂದು ಹುಬ್ಬಳ್ಳಿ ಕಿಮ್ಸ್ ನಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಸಂಖ್ಯೆ 72ಕ್ಕೆ ಏರಿಕೆಯಾಗಿದೆ. ಈಗಾಗಲೇ 46 ಜನ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಉಳಿದವರು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss