Tuesday, June 28, 2022

Latest Posts

ಧಾರವಾಡ ಜಿಲ್ಲೆಯಲ್ಲಿ ಎರಡು ಕೋವಿಡ್ ದೃಢ , 50ಕ್ಕೇರಿದ ಪ್ರಕರಣಗಳ ಸಂಖ್ಯೆ

ಧಾರವಾಡ: ಜಿಲ್ಲೆಯಲ್ಲಿ ಮಂಗಳವಾರ ಮತ್ತೆರಡು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ಪಿ-3436 (48-ಪುರುಷ) ಹಾಗೂ ಪಿ-3437 (66- ಮಹಿಳೆ) ಈ ಇಬ್ಬರೂ ರಾಜಸ್ಥಾನ ರಾಜ್ಯದ ಅಜ್ಮೀರ್ ನಿಂದ ಹಿಂದಿರುಗಿರುವ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ.
ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದರು. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 50 ಕ್ಕೆ ಏರಿಕೆಯಾಗಿದೆ. 26 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ . ಉಳಿದವರು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss