Sunday, July 3, 2022

Latest Posts

ಧಾರವಾಡ ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್ ಪಾಸಿಟಿವ್ ದೃಢ

ಧಾರವಾಡ: ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಬುಧವಾರ ಮತ್ತೊಂದು ಕೋವಿಡ್ ಪ್ರಕರಣ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ಸೋಂಕಿತ ವ್ಯಕ್ತಿ ಪಿ-3913(54) ಪುರುಷ ಎಂದು ಗುರುತಿಸಿದ್ದು, ಇವರು ಹುಬ್ಬಳ್ಳಿ ಶಾಂತಿನಗರ ಹಾಗೂ ವಿನಯ ನಗರದ ನಿವಾಸಿ. ಇವರು ಮೇ.29ರಂದು ಕೋವಿಡ್ ದೃಢಪಟ್ಟ ವ್ಯಕ್ತಿಯ ಪಿ-2710ರ ಸಂಪರ್ಕಿ ಹೊಂದಿದ್ದರೆ0ಬುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಈವರೆಗೂ ಹೋಂ ಕ್ವಾರಂಟೈನಲ್ಲಿದ್ದರು. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 51ಕ್ಕೆ ಏರಿಕೆಯಾಗಿದೆ. 27 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಉಳಿದವರು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss