Thursday, August 11, 2022

Latest Posts

ಧಾರವಾಡ ಜಿಲ್ಲೆಯಲ್ಲಿ ಮೂರು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆ: ಸೋಂಕಿತರ ಸಂಖ್ಯೆ 178ಕ್ಕೆ ಏರಿಕೆ

ಧಾರವಾಡ: ಜಿಲ್ಲೆಯಲ್ಲಿ ಕೊರೋನಾ ವೈರಸ್ ತಾಂಡವಾಡುತ್ತಿದ್ದು, ನಿತ್ಯವೂ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಶುಕ್ರವಾರವೂ ಮೂರು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ಪಿ-7956 (54-ಪುರುಷ) ಹುಬ್ಬಳ್ಳಿ ಅರಳಿಕಟ್ಟಿ ಓಣಿಯ ನಿವಾಸಿ. ಪಿ-7947 (51-ಪುರುಷ) ಹುಬ್ಬಳ್ಳಿ ನಗರದ ಗಣೇಶಪೇಟೆ ನಿವಾಸಿ. ಈ ಇಬ್ಬರೂ ವ್ಯಕ್ತಿಗಳ ಸಂಪರ್ಕ ಪತ್ತೆ ಮಾಡಲಾಗುತ್ತಿದೆ.
ಪಿ-7948 (55-ಮಹಿಳೆ)ನವಲಗುಂದ ತಾಲ್ಲೂಕು ಮೊರಬ ಗ್ರಾಮದ ನಿವಾಸಿ. ಪಿ-7038 ಹಾಗೂ ಪಿ- 7040 ಅವರೊಂದಿಗೆ ಸಂಪರ್ಕ ಹೊಂದಿದ್ದರು. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 178ಕ್ಕೆ ಏರಿಕೆಯಾಗಿದೆ. 56 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss