Sunday, August 14, 2022

Latest Posts

ಧಾರವಾಡ ಜಿಲ್ಲೆಯಲ್ಲಿ 157 ಜನರಿಗೆ ಸೋಂಕು ದೃಢ

ಧಾರವಾಡ: ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿoದ ಮೃತರ ಸಂಖ್ಯೆ ನಿತ್ಯವೂ ಹೆಚ್ಚುತ್ತಿದೆ. ಸೋಮವಾರವೂ ನಾಲ್ಕು ಜನ ಮೃತಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 197ಕ್ಕೆ ಏರಿಕೆ ಕಂಡಿದೆ.
ಮೃತರೆಲ್ಲರೂ ತೀವ್ರ ಉಸಿರಾಟದ ತೊಂದರೆ ಹಾಗೂ ಜ್ವರ, ಕಫ, ಎದೆ ನೋವು ಇತರ ಲಕ್ಷಣಗಳನ್ನು ಹೊಂದಿದ್ದರು. ನಿಯಮಾನುಸಾರ ಪಾರ್ಥಿವ ಶರೀರಗಳನ್ನು ಅಂತ್ಯಕ್ರಿಯೆ ಮಾಡಲಾಗಿದೆ.
157 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಆರು ಸಾವಿರ ಗಡಿ(6,126ಕ್ಕೆ ) ದಾಟಿದೆ.
275 ಜನ ಸೋಂಕಿoದ ಗುಣವಾಗಿದ್ದು, ಈವರೆಗೆ 3,516 ಜನ ಕಾಯಿಲೆ ಮುಕ್ತರಾಗಿದ್ದಾರೆ. ಜಿಲ್ಲೆಯ 2,413 ಸಕ್ರಿಯ ಪ್ರಕರಣಗಳಿಗೆ ಹುಬ್ಬಳ್ಳಿ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss