Wednesday, August 10, 2022

Latest Posts

ಧಾರವಾಡ ಜಿಲ್ಲೆಯಲ್ಲಿ 188 ಜನರಲ್ಲಿ ಕೊರೋನಾ ಸೋಂಕು ಪತ್ತೆ, 293 ಜನ ಗುಣಮುಖ

ಧಾರವಾಡ: ಜಿಲ್ಲೆಯಲ್ಲಿ ಹೊಸದಾಗಿ 188 ಜನರಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4,835ಕ್ಕೆ ಏರಿದೆ. 293 ಜನರು ಸೋಂಕಿoದ ಗುಣವಾಗಿದ್ದು, ಈವರೆಗೆ 2,226 ಜನ ಕಾಯಿಲೆ ಮುಕ್ತರಾಗಿದ್ದಾರೆ. ಜಿಲ್ಲೆಯ 2,446 ಸಕ್ರಿಯ ಪ್ರಕರಣಗಳಿಗೆ ಹುಬ್ಬಳ್ಳಿ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡುತ್ತಿದೆ.
ಕೊರೋನಾ ಸೋಂಕಿನಿoದ ಮೃತರ ಸಂಖ್ಯೆ ನಿತ್ಯವೂ ಹೆಚ್ಚುತ್ತಿದೆ. ಮಂಗಳವಾರವೂ 8 ಜನರು ಮೃತಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 163ಕ್ಕೆ ಏರಿಕೆ ಕಂಡಿದೆ. ಮೃತರೆಲ್ಲರೂ ತೀವ್ರ ಉಸಿರಾಟದ ತೊಂದರೆ ಹಾಗೂ ಜ್ವರ, ಕಫ, ಎದೆ ನೋವು ಇತರ ಲಕ್ಷಣಗಳನ್ನು ಹೊಂದಿದ್ದರು. ನಿಯಮಾನುಸಾರ ಪಾರ್ಥಿವ ಶರೀರಗಳನ್ನು ಅಂತ್ಯಕ್ರಿಯೆ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss