Sunday, June 26, 2022

Latest Posts

ಧಾರವಾಡ ಜಿಲ್ಲೆಯಲ್ಲಿ 219 ಜನರಿಗೆ ಸೋಂಕು ದೃಢ, 199 ಮಂದಿ ಗುಣಮುಖ, 8 ಬಲಿ

ಧಾರವಾಡ: ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿoದ ಮೃತರ ಸಂಖ್ಯೆ ನಿತ್ಯವೂ ಹೆಚ್ಚುತ್ತಿದೆ. ಶುಕ್ರವಾರವೂ ಈ ಸೋಂಕಿಗೆ ತುತ್ತಾದ 8 ಜನ ಮೃತಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 222ಕ್ಕೆ ಏರಿದೆ.
ಮೃತರೆಲ್ಲರೂ ತೀವ್ರ ಉಸಿರಾಟದ ತೊಂದರೆ ಹಾಗೂ ಜ್ವರ, ಕಫ, ಎದೆ ನೋವು ಇತರ ಲಕ್ಷಣಗಳನ್ನು ಹೊಂದಿದ್ದರು. ನಿಯಮಾನುಸಾರ ಪಾರ್ಥಿವ ಶರೀರಗಳನ್ನು ಅಂತ್ಯಕ್ರಿಯೆ ಮಾಡಲಾಗಿದೆ.
219 ಜನರಲ್ಲಿ ಹೊಸದಾಗಿ ಸೋಂಕು ದೃಢಪಡು ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಏಳು ಸಾವಿರ ಗಡಿ (7,147) ದಾಟಿದೆ. 199 ಜನ ಸೋಂಕಿoದ ಗುಣವಾಗಿದ್ದು, ಈವರೆಗೆ 4,524 ಜನ ಕಾಯಿಲೆ ಮುಕ್ತರಾಗಿದ್ದಾರೆ. ಜಿಲ್ಲೆಯ 2,401 ಸಕ್ರಿಯ ಪ್ರಕರಣಗಳಿಗೆ ಹುಬ್ಬಳ್ಳಿ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss