Wednesday, July 6, 2022

Latest Posts

ಧಾರವಾಡ ಜಿಲ್ಲೆಯಲ್ಲಿ 253 ಜನರಲ್ಲಿ ಸೋಂಕು ದೃಢ, 351 ಜನ ಗುಣಮುಖ

ಧಾರವಾಡ: ಜಿಲ್ಲೆಯಲ್ಲಿ ನಿತ್ಯವೂ ಸೋಂಕಿತರ ಹಾಗೂ ಮೃತರ ಸಂಖ್ಯೆ ಹೆಚ್ಚುತ್ತಿದೆ. ಬುಧವಾರ ಈ ಸೋಂಕಿಗೆ ತುತ್ತಾದ 9 ಜನ ಮೃತಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 258ಕ್ಕೆ ಏರಿದೆ.
ಮೃತರು ತೀವ್ರ ಉಸಿರಾಟದ ತೊಂದರೆ ಹಾಗೂ ಜ್ವರ, ಕಫ, ಎದೆ ನೋವು ಇತರ ಲಕ್ಷಣಗಳನ್ನು ಹೊಂದಿದ್ದರು. ನಿಯಮಾನುಸಾರ ಪಾರ್ಥಿವ ಶರೀರಗಳನ್ನು ಅಂತ್ಯಕ್ರಿಯೆ ಮಾಡಲಾಗಿದೆ.
253 ಜನರಲ್ಲಿ ಹೊಸದಾಗಿ ಸೋಂಕಿತರು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 8,387ಕ್ಕೆ ಏರಿದೆ. 351 ಜನ ಸೋಂಕಿoದ ಗುಣವಾಗಿದ್ದು, ಈವರೆಗೆ 5,716 ಜನ ಕಾಯಿಲೆ ಮುಕ್ತರಾಗಿದ್ದಾರೆ. ಜಿಲ್ಲೆಯ 2,413 ಸಕ್ರಿಯ ಪ್ರಕರಣಗಳಿಗೆ ಹುಬ್ಬಳ್ಳಿ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss