Thursday, August 11, 2022

Latest Posts

ಧಾರವಾಡ ಜಿಲ್ಲೆಯಲ್ಲಿ 300 ಜನರಲ್ಲಿ ಕೊರೋನಾ ದೃಢ, 249 ಜನರು ಗುಣಮುಖ

ಧಾರವಾಡ: ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಹಾಗೂ ಮೃತರ ಸಂಖ್ಯೆ ಹೆಚ್ಚುತ್ತಿದೆ. ಭಾನುವಾರ ಈ ಸೋಂಕಿನಿAದ ಒಂಭತ್ತು ಜನರು ಮೃತಪಟ್ಟಿದ್ದು, ಈ ಮೂಲಕ ಮೃತರ ಸಂಖ್ಯೆ 316ಕ್ಕೆ ಏರಿದೆ.
ಮೃತರು ತೀವ್ರ ಉಸಿರಾಟದ ತೊಂದರೆ ಹಾಗೂ ಜ್ವರ, ಕಫ, ಎದೆ ನೋವು ಇತರ ಲಕ್ಷಣಗಳನ್ನು ಹೊಂದಿದ್ದರು. ನಿಯಮಾನುಸಾರ ಪಾರ್ಥಿವ ಶರೀರಗಳನ್ನು ಅಂತ್ಯಕ್ರಿಯೆ ಮಾಡಲಾಗಿದೆ.
300 ಜನರಲ್ಲಿ ಹೊಸದಾಗಿ ಸೋಂಕಿತರು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 11,048ಕ್ಕೆ ಏರಿದೆ. 249 ಜನ ಸೋಂಕಿoದ ಗುಣವಾಗಿದ್ದು, ಈವರೆಗೆ 8,369 ಜನ ಕಾಯಿಲೆ ಮುಕ್ತರಾಗಿದ್ದಾರೆ. ಜಿಲ್ಲೆಯ 23,63 ಸಕ್ರಿಯ ಪ್ರಕರಣಗಳಿಗೆ ಹುಬ್ಬಳ್ಳಿ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss