ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಂದಕಕ್ಕೆ ಉರುಳಿದ ಪರಿಣಾಮ ನಾಲ್ವರಿಗೆ ಗಾಯಗಳಾದ ಘಟನೆ ಧಾರವಾಡ ತಾಲೂಕಿನ ಉಪ್ಪಿನಬೆಟಗೇರಿ ಗ್ರಾಮದ ಬಳಿಯ ಯಾದವಾಡ ರಸ್ತೆಯಲ್ಲಿ ನಡೆದಿದೆ.
ಕಲ್ಲೆ ಗ್ರಾಮದಿಂದ ಕಾರಿನಲ್ಲಿ ನಾಲ್ವರು ಧಾರವಾಡ ಕಡೆಗೆ ಹೊರಟಿದ್ದರು. ಯಾದವಾಡ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಕಂದಕಕ್ಕೆ ಉರುಳಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಕಾರಿನಲ್ಲಿದ್ದ ಓರ್ವ ಬಾಲಕ, ವೃದ್ಧ ಸೇರಿದಂತೆ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಕೂಡಲೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದೆ. ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.