ಹೊಸ ದಿಗಂತ ವರದಿ ಧಾರವಾಡ:
ಅ.28ರಂದು ಮತದಾನ ನಡೆದಿದ್ದ ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಮತ ಎಣಿಕೆ ಕಾರ್ಯ ಮಂಗಳವಾರ ನಗರದ ಕೃಷಿ ವಿವಿಯ ಎಣಿಕೆ ಕೇಂದ್ರದಲ್ಲಿ ಪ್ರಾಂಭಗೊಂಡಿದೆ.
ಚುನಾವಣಾ ಆಯೋಗದ ನಿರ್ದೇಶನದಂತೆ ಬೆಳಿಗ್ಗೆ 7.55ಕ್ಕೆ ಮತಪೆಟ್ಟಿಗೆಗಳನ್ನು ಇರಿಸಿದ್ದ ಭದ್ರತಾ ಕೊಠಡಿಗಳನ್ನು ಅಭ್ಯರ್ಥಿಗಳು, ಅಧಿಕೃತ ಏಜೆಂಟರ್ ಗಳ ಸಮ್ಮುಖದಲ್ಲಿ ತೆರೆಯಲಾಯಿತು.
ಒಟ್ಟು 11 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.ಒಂದು ಅಂಚೆ ಮತ ಸೇರಿ 52,068 ಮತಗಳು ಚಲಾವಣೆಯಾಗಿವೆ. ಎರಡು ಕೊಠಡಿಗಳ 14 ಟೇಬಲ್ಲುಗಳಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ.
ಚುನಾವಣಾ ವೀಕ್ಷಕರಾದ, ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಚುನಾವಣಾಧಿಕಾರಿ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್, ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಕಾಂತ ಇದ್ದರು.