Tuesday, August 16, 2022

Latest Posts

ಧಾರವಾಡ: ವಿವಿಧ ಬೇಡಿಕೆ ಈಡೇರಿಕೆಗೆ ಗ್ರಾಪಂ ನೌಕರರ ಆಗ್ರಹ

ಧಾರವಾಡ: ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಸಂಯೋಜಿತ
ಗ್ರಾ.ಪಂ. ನೌಕರರ ಸಂಘದ ಜಿಲ್ಲಾ ಸಮಿತಿ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಶುಕ್ರವಾರ ಪ್ರತಿಭಟಿಸಿದರು.
ಒಂದು ಗಂಟೆಗೂ ಅಧಿಕ ಹೊತ್ತು ಪ್ರತಿಭಟಿಸಿದ ನೌಕರರು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಗ್ರಾ.ಪಂ. ನೌಕರರನ್ನು ಕರೊನಾ ವಾರಿಯರ್ಸ್‌ ಎಂದು ಪರಿಗಣಿಸಬೇಕು. ನೌಕರರ ಕೆಲಸದ ಪುನರ್ ವಿಮರ್ಶೆಯ ಕಮಿಟಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
ಲೆಕ್ಕ ಸಹಾಯಕರ ನೇಮಕ, ನಿಗದಿತ ಸಮಯಕ್ಕೆ ಸಂಭಳ ನೀಡಿಕೆ, ಸಂಭಂಳ ಕಡತ ಮಾಡದಂತೆ ವಿವಿಧ ಬೇಡಿಕೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಕ್ಕಿಸಿದರು.
ಪ್ರತಿಭಟನೆಯಲ್ಲಿ ಗ್ರಾ.ಪಂ ನೌಕರರ ಸಂಘದ ಅಧ್ಯಕ್ಷ ಬಿ.ಐ. ಈಳಗೇರ, ಐ.ಎಂ.ಪಾಪಣ್ಣವರ, ಕಲ್ಮೇಶ ತಿಮ್ಮಾಪೂರ ಸೇರಿದಂತೆ ಅನೇಕರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!