Tuesday, August 9, 2022

Latest Posts

ಧಾರಾಕಾರ ಸುರಿಯುತ್ತಿರುವ ಮಳೆ: ಕಾಸರಗೋಡು ಸಹಿತ ಕೇರಳದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಕಾಸರಗೋಡು: ಕಾಸರಗೋಡು ಸಹಿತ ಕೇರಳದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಈ ನಿಮಿತ್ತ ಕಾಸರಗೋಡು, ಕಣ್ಣೂರು, ಕಲ್ಲಿಕೋಟೆ, ಮಲಪ್ಪುರಂ, ವಯನಾಡು, ಆಲಪ್ಪುಳ, ಇಡುಕ್ಕಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರ ಪೂರ್ತಿ ಧಾರಾಕಾರ ಮಳೆ ಸುರಿದಿದೆ. ಜಿಲ್ಲೆಯ ಕೆಲವೊಂದು ಪ್ರತ್ಯೇಕ ಸ್ಥಳಗಳಲ್ಲಿ ಬಿರುಸಿನ ಮಳೆಯಾಗುವ ಸಾಧ್ಯತೆಯಿದೆ. ಭಾರೀ ಮಳೆಯ ‌ಕಾರಣ ಅಪಾಯ ಸಾಧ್ಯತೆ ಹಿನ್ನೆಲೆಯಲ್ಲಿ ಕೇಂದ್ರ ಹವಾಮಾನ ಇಲಾಖೆಯು ಕಾಸರಗೋಡು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ.
ಆಗಸ್ಟ್ 10 ಮತ್ತು 11ರಂದು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಭೂಕುಸಿತ, ಮಣ್ಣು ಕುಸಿತ, ಬಂಡೆ ಕಲ್ಲು ಉರುಳುವ ಮತ್ತು ತಗ್ಗು ಪ್ರದೇಶಗಳಲ್ಲಿ ಪ್ರವಾಹದ ಸಾಧ್ಯತೆ ಬಗ್ಗೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಕೊಳ್ಳುವಂತೆ ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಸ್‌ಡಿಎಂಎ)ವು ಸಾರ್ವಜನಿಕರು ಮತ್ತು ಸರಕಾರಿ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss