ಹೊಸ ದಿಗಂತ ವರದಿ, ಉಡುಪಿ:
ಕರ್ನಾಟಕ ಸರ್ಕಾಎರದ ಹಿಂದು ಧಾರ್ಮಿಕ ದತ್ತಿ ಇಲಾಖೆಯ ರಾಜ್ಯದ ಎಲ್ಲ ಜಿಲ್ಲೆಗಳ ಧಾರ್ಮಿಕ ಪರಿಷತ್ ಸದಸ್ಯರ ತರಬೇತಿ ಕಾರ್ಯಾಗಾರ ಹಾಗೂ ‘ಗುಡಿ’ ಪತ್ರಿಕೆ ಬಿಡುಗಡೆ ಸಮಾರಂಭ ಬೆಂಗಳೂರು ವಿಧಾನ ಸೌಧದ ಬಾಂಕ್ವೆಟ್ ಸಭಾಂಗಣದಲ್ಲಿ ಗುರುವಾರ ನಡೆಯಿತು.
ಸಮಾರಂಭವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉದ್ಘಾಟಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಇಲಾಖೆಯ ಮಾಸ ಪತ್ರಿಕೆ ‘ಗುಡಿ’ ಬಿಡುಗಡೆ ಮಾಡಿದರು. ಆರ್ಟ್ ಆಫ್ ಲಿವಿಂಗ್ ನ ರವಿಶಂಕರ್ ಗುರೂಜಿ ಅವರು ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಇ-ಆಡಳಿತಕ್ಕೆ ಚಾಲನೆ ನೀಡಿದರು.
ಸಮಾರಂಭದಲ್ಲಿ ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಎಚ್.ಎಂ. ರಮೇಶ್ ಗೌಡ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರು, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.