ಹೊಸ ದಿಗಂತ ವರದಿ, ಮೈಸೂರು:
ಮೈಸೂರು ಜಿಲ್ಲೆಯ ನಂಜನಗೂಡಿನ ಮಲ್ಲನ ಮೂಲೆ ಮಠದ ಬಳಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ನಾಡ ಹಸುವೊಂದು ಸಾವಿಗೀಡಾಗಿದ ಘಟನೆ ಮಂಗಳವಾರ ನಡೆದಿದೆ.
ಮಲ್ಲನ ಮೂಲೆ ಮಠಕ್ಕೆ ಸೇರಿದ ಹಸು ಮಲ್ಲನ ಮೂಲೆ ಮಠದ ಬಳಿ ಇರುವ ಪೆಟ್ರೋಲ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ಮೈಸೂರಿನಿಂದ ನಂಜನಗೂಡು ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರು ಡಿಕ್ಕಿ ಹೊಡೆದಿದೆ.