Thursday, February 25, 2021

Latest Posts

ನಂಜನಗೂಡು ತಾಲೂಕಿನ ಎರಡು ಗ್ರಾಮಗಳಲ್ಲಿ ಕಾಡಾನೆಗಳು ಪ್ರತ್ಯಕ್ಷ, ಗ್ರಾಮಸ್ಥರಲ್ಲಿ ಆತಂಕ

ಹೊಸದಿಗಂತ ವರದಿ, ಮೈಸೂರು:

ಜಿಲ್ಲೆಯ ನಂಜನಗೂಡು ತಾಲೂಕಿನ ಎರಡು ಗ್ರಾಮಗಳಲ್ಲಿ ಕಾಡಾನೆಗಳು ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕವನ್ನುಂಟು ಮಾಡಿದೆ.

ನಂಜನಗೂಡು ತಾಲೂಕಿನ ಹೆಡಿಯಾಲ ಅರಣ್ಯ ಪ್ರದೇಶದಿಂದ ರೈಲು ತಡೆಗೋಡೆ ದಾಟಿ ಬಳ್ಳೂರು ಹುಂಡಿ ಗ್ರಾಮದಲ್ಲಿ ಪ್ರತ್ಯಕ್ಷವಾದ ಒಂಟಿ ಸಲಗ ಆನೆ ಕೆಲಕಾ ತುಂಟಾಟ ನಡೆಸಿತು. ಈ ಆನೆಯನ್ನು ನೋಡಿದ ಗ್ರಾಮಸ್ಥರು ಭಯಭೀತರಾಗಿ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಆನೆಯನ್ನು ಕಾಡಿಗಟ್ಟಿದರು.

ನಂಜನಗೂಡು ತಾಲೂಕಿನ ಮಲ್ಕುಂಡಿ ಗ್ರಾಮದ ಮಹಾದೇವಪ್ಪ ಎಂಬುವವರ ಜಮೀನಿನಲ್ಲೂ ಕಾಡಾನೆ ದಾಂಧಲೆ ನಡೆಸಿ, ಬೆಳೆ ನಾಶಗೊಳಿಸಿದೆ. ನೀರಿನ ಡ್ರಮ್‌ಗೆ ದಂತದಿಂದ ಕಾಡಾನೆ ತಿವಿದಿದೆ. ನುಗು ಜಲಾಶಯದ ಪ್ರದೇಶದಿಂದ ಬಂದಿರುವ ಆನೆ, ಗ್ರಾಮಸ್ಥರಲ್ಲಿ ಕೆಲ ಗಂಟೆಗಳ ಕಾಲ ಆತಂಕ ಹುಟ್ಟಿಸಿತು. ಬಳಿಕ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಆನೆಯನ್ನು ಕಾಡಿಗೆ ವಾಪಸ್ ಕಳುಹಿಸಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!