Thursday, August 11, 2022

Latest Posts

ನಂದಿನಿ ಬ್ರಾಂಡ್‌ಗೆ ಕೆಟ್ಟ ಹೆಸರು ತರುವುದು ಬೇಡ: ಹಾಲು ಒಕ್ಕೂಟದ ಅಧ್ಯಕ್ಷ ರಾಮಚಂದ್ರ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ,  ಮಂಡ್ಯ :

ರೈತರ ಬದುಕಿನ ಹಾಸುಹೊಕ್ಕಾಗಿರುವ ನಂದಿನಿ ಬ್ರಾಂಡ್‌ಗೆ ಕೆಟ್ಟ ಹೆಸರು ತರುವ ಪ್ರಯತ್ನವನ್ನು ಯಾರೂ ಮಾಡಬಾರದು. ಇದರಿಂದ ಲಕ್ಷಾಂತರ ರೈತರ ಬದುಕು ತೊಂದರೆಗೆ ಸಿಲುಕುವ ಸಾಧ್ಯತೆಗಳಿವೆ ಎಂದು ಮಂಡ್ಯ ಹಾಲು ಒಕ್ಕೂಟದ ಅಧ್ಯಕ್ಷ ಬಿ.ಆರ್. ರಾಮಚಂದ್ರ ತಿಳಿಸಿದರು.
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಒಕ್ಕೂಟದಲ್ಲಿ ನಡೆದಿರುವ ಅವ್ಯವಹಾರಗಳ ಕುರಿತಂತೆ ಸರ್ಕಾರ ನೇಮಕ ಮಾಡಿರುವ ತನಿಖಾ ಸಂಸ್ಥೆ ತನಿಖೆ ನಡೆಸುತ್ತಿದೆ. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ, ಅದನ್ನು ಬಿಟ್ಟು ರೈತರ ಬದುಕಿಗೆ ಸನಿಹದಲ್ಲಿರುವ ನಂದಿನಿ ಉತ್ಪನ್ನಗಳಿಗೆ ಕೆಟ್ಟ ಹೆಸರು ತರಬಾರದು ಎಂದು ಮನವಿ ಮಾಡಿದರು.
ಮಧುಚಂದನ್ ವಿರುದ್ಧ ಮಾನನಷ್ಟ ಮೊಕದ್ದಮೆ :
ಹೈನುಗಾರಿಕೆಯಲ್ಲಿ ತೊಡಗದ ಮಧುಚಂದನ್ ಅವರು ನಂದಿನಿ ಹಾಗೂ ಒಕ್ಕೂಟದ ಬಗ್ಗೆ ಇಲ್ಲ ಸಲ್ಲದ ಆರೋಪಗಳನ್ನು ಮಾಡುವುದು, ಅಧ್ಯಕ್ಷರು, ನಿರ್ದೇಶಕರ ಬಗ್ಗೆ ವೈಯಕ್ತಿಕ ನಿಂಧನೆ ಮಾಡಿದ್ದಾರೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss