Thursday, August 11, 2022

Latest Posts

ನಕಲಿ ಯುನಿವರ್ಸಿಟಿ ಹೆಸರಲ್ಲಿ ನಕಲಿ ಡಾಕ್ಟರೇಟ್ ಪದವಿ : ಪೊಲೀಸರ ದಾಳಿ, ಮೂವರ ಬಂಧನ

ಮೈಸೂರು : ಹಣ ಪಡೆದು ನಕಲಿ ಯುನಿವರ್ಸಿಟಿ ಹೆಸರಲ್ಲಿ ನಕಲಿ ಡಾಕ್ಟರೇಟ್ ಪದವಿ ಪ್ರಧಾನ ಮಾಡಲಾಗುತ್ತಿದೆ ಎಂಬ ಆರೋಪದ ದೂರಿನ ಮೇಲೆ ಕಾರ್ಯಕ್ರಮ ನಡೆಯುತ್ತಿದ್ದ ಹೋಟೆಲ್ ಮೇಲೆ ದಾಳಿ ನಡೆಸಿದ ಡಿಸಿಪಿ ಪ್ರಕಾಶ್ ಗೌಡ ಅವರು, ಮೂವರು ಕಾರ್ಯಕ್ರಮ ಆಯೋಜಕರನ್ನು ವಶಕ್ಕೆ ತೆಗೆದುಕೊಂಡು, ಪ್ರಶಸ್ತಿ ಪತ್ರಗಳನ್ನು ವಶಪಡಿಸಿಕೊಂಡಿರುವ ಘಟನೆ ಮೈಸೂರಿನಲ್ಲಿ ಶನಿವಾರ ನಡೆದಿದೆ.
ತಮಿಳುನಾಡು ಮೂಲದ ಇಂಟರ್ ನ್ಯಾಷನಲ್ ಗ್ಲೋಬಲ್ ಪೀಸ್ ಯುನಿವರ್ಸಿಟಿ ಅಂತಾರಾಷ್ಟ್ರೀಯ ಎಂಬ ನಕಲಿ ವಿವಿಯ ಹೆಸರಿನಲ್ಲಿ ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ೧೪೨ ಕ್ಕೂ ಹೆಚ್ಚು ಮಂದಿಗೆ ಹಣಪಡೆದು ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ, ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ ಮತ್ತಿತರ ರಾಜ್ಯ ಗಳಿಂದ ೧೪೦ಕ್ಕೂ ಹೆಚ್ಚು ಜನರು ಪದವಿ ಸ್ವೀಕರಿಸಲು ಆಗಮಿಸಿದ್ದಾರೆ ಎಂಬ ಮಾಹಿತಿಯನ್ನು ತಿಳಿದ ಪೊಲೀಸರು ಡಿಸಿಪಿ ಪ್ರಕಾಶ್‌ಗೌಡ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜನೆಯಾಗಿದ್ದ ಖಾಸಗಿ ಹೋಟೆಲ್ ಮೇಲೆ ದಾಳಿ ಮಾಡುತ್ತಿದ್ದಂತೆ, ಕಾರ್ಯಕ್ರಮ ಆಯೋಜನೆ ಮಾಡಿದ್ದ ಕೆಲವರು ಸ್ಥಳದಿಂದ ಪರಾರಿಯಾದರೆ, ಮೂವರು ಸಿಕ್ಕಿ ಬಿದ್ದರು. ಪ್ರಶಸ್ತಿ ಸ್ವೀಕರಿಸಲು ಬಂದಿದ್ದವರು ಪೊಲೀಸರ ದಾಳಿ ಕಂಡು ಬೆಚ್ಚಿ ಬಿದ್ದರು. ಕೊರೋನಾ ಸೋಂಕು ಹರಡುವಿಕೆಯ ನಡುವೆ ಕಾರ್ಯಕ್ರಮ ನಡೆಸುವುದಕ್ಕೆ ಪೊಲೀಸರಿಂದ  ಅನುಮತಿ ಪಡೆದಿರಲಿಲ್ಲ. ಹೀಗಾಗಿ ಸಿಕ್ಕಿ ಬಿದ್ದ ಕಾರ್ಯಕ್ರಮದ ಮೂವರು ಆಯೋಜಕರನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು, ವಿಚಾರಣೆಗೆ ಒಳಪಡಿಸಿದರು. ಅಲ್ಲದೆ ಕಾರ್ಯಕ್ರಮದ ಪ್ರಶಸ್ತಿ ಪತ್ರ, ಮೊಮೆಂಟೋಗಳನ್ನು ಪೊಲೀಸರು ವಶಪಡಿಸಿಕೊಂಡರು.
ಅಲ್ಲದೇ ಗೌರವ ಡಾಕ್ಟರೇಟ್ ಪದವಿ ಪಡೆಯಲು ಬಂದಿದ್ದ ಆಕಾಂಕ್ಷಿಗಳ ವಿಚಾರಣೆ ನಡೆಸಿದಾಗ, ಪ್ರತಿಯೊಬ್ಬರಿಂದ ೫೦ ಸಾವಿರದಿಂದ ೧ಲಕ್ಷ ರೂ.ಪಡೆಯಲಾಗಿತ್ತು ಎಂಬ ಮಾಹಿತಿ ಹೊರ ಬಿತ್ತು. ಈ ಹಿನ್ನಲೆಯಲ್ಲಿ ಕಾರ್ಯಕ್ರಮ ಆಯೋಜಕರ ವಿರುದ್ಧ ವಿಜಯನಗರ ಪೊಲೀಸ್ ಠಾಣೆ ಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಲಾಯಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss