ಬೆಂಗಳೂರು: ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜರಿಗೆ ಕೊರೋನಾ ಸೋಂಕು ದೃಢ ಪಟ್ಟಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೋನಾ ಸೋಂಕಿನಿಂದ ಬೇಗ ಚೇತರಿಸಿಕೊಂಡು ಗುಣಮುಖರಾಗಲಿ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಎಸ್ವೈ ಜನಪ್ರಿಯ ಶಾಸಕರು, ನಗರಾಭಿವೃದ್ಧಿ ಖಾತೆ ಸಚಿವರಾದ ಶ್ರೀ ಭೈರತಿ ಬಸವರಾಜ್ ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಚೇತರಿಸಿಕೊಳ್ಳಲಿ, ಮತ್ತೆ ಎಂದಿನಂತೆ ತಮ್ಮ ಕರ್ತವ್ಯಗಳನ್ನು ನಿರ್ವಹಿಸಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಜನಪ್ರಿಯ ಶಾಸಕರು, ನಗರಾಭಿವೃದ್ಧಿ ಖಾತೆ ಸಚಿವರಾದ ಶ್ರೀ ಬೈರತಿ ಬಸವರಾಜ್ ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಚೇತರಿಸಿಕೊಳ್ಳಲಿ, ಮತ್ತೆ ಎಂದಿನಂತೆ ತಮ್ಮ ಕರ್ತವ್ಯಗಳನ್ನು ನಿರ್ವಹಿಸಲಿ ಎಂದು ಹಾರೈಸುತ್ತೇನೆ.
— B.S. Yediyurappa (@BSYBJP) September 15, 2020