Monday, August 15, 2022

Latest Posts

ನಗರ ಮೂಲ ಸೌಕರ್ಯ ಅಭಿವೃದ್ಧಿ ನಿಗಮ ಮಂಡಳಿಗೆ ಶಾಸಕ ಮುನೇನಕೊಪ್ಪ ಆಯ್ಕೆ

ಧಾರವಾಡ: ನಗರ ಮೂಲ ಸೌಕರ್ಯ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷರಾಗಿ ಧಾರವಾಡ ಜಿಲ್ಲೆಯ ನವಲಗುಂದ ಕ್ಷೇತ್ರದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಅವರನ್ನು ಆಯ್ಕೆ ಮಾಡಿದ್ದಕ್ಕೆ ಅವರು ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಯ್ಕೆ ವಿಷಯ ಮಾಧ್ಯಮದ ಮೂಲಕ ಗೊತ್ತಾಗಿದೆ. ಅಧಿಕೃತವಾಗಿ ಮಾಹಿತಿ ಬಂದಿಲ್ಲ. ಸರ್ಕಾರ ನೀಡಿದ ಜವಾಬ್ದಾರಿ ಅತ್ಯಂತ ಸಮರ್ಥವಾಗಿ ನಿರ್ವಹಿಸುವುದಾಗಿ ಹೇಳಿದರು.
ಧಾರವಾಡ ಜಿಲ್ಲೆಯಲ್ಲಿ ಮೊದಲಿನಿಂದ ಗ್ರಾಮೀಣ ಭಾಗಕ್ಕೆ ಸಚಿವ ಸ್ಥಾನ ನೀಡಬೇಕೆಂಬ ಕೂಗು ಕೇಳಿಬಂದಿತ್ತು. ಆದರೆ ಸರ್ಕಾರ ನಿಗಮ ಮಂಡಳಿ ನೀಡಿದೆ. ಅಭಿವೃದ್ಧಿ ನಿಗಮ ಮಂಡಳಿ ನೇಮಕ ಮಾಡಿರುವುದು ಖುಷಿ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.
ತಮಗೆ ಸಚಿವ ಸ್ಥಾನ ನೀಡಬೇಕೆಂದು ಕಾರ್ಯಕರ್ತರ ಒತ್ತಾಯವಿದೆ. ಮುಂದೆ ಸಚಿವ ಸ್ಥಾನ ಸಿಗುವ ಭರವಸೆಯಿದೆ. ಕ್ಷೇತ್ರ ಅಭಿವೃದ್ಧಿ ಹಾಗೂ ನಗರ ಅಭಿವೃದ್ಧಿಗೆ ಶ್ರಮಿಸುವೆ. ಸರ್ಕಾರ-ಪಕ್ಷ ನೀಡಿದ ಜವಾಬ್ದಾರಿ ಸಮರ್ಥವಾಗಿ, ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುವುದಾಗಿ ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss