ಹೊಸದಿಗಂತ ಆನ್ ಲೈನ್ ಡೆಸ್ಕ್:
ನಟಿ ಕಂಗನಾ ರಣಾವತ್ ಹಾಗು ಅವರ ಸಹೋದರಿ ರಂಗೋಲಿ ಚಾಂಡೇಲ್ ಅವರಿಗೆ ಬಂಧನದಿಂದ ಬಾಂಬೆ ಹೈಕೋರ್ಟ್ ಮಂಗಳವಾರ ಮಧ್ಯಂತರ ರಕ್ಷಣೆ ನೀಡಿದೆ.
ಕೋಮು ಪ್ರಚೋದನಾಕಾರಿ ಟ್ವೀಟ್ ಆರೋಪದ ಮೇಲೆ ಮುಂಬೈ ಪೊಲೀಸರು ದಾಖಲಿಸಿದ ಎಫ್ಐಆರ್ ವಿರುದ್ಧ ನಟಿ ಕಂಗನಾ ರಣಾವತ್ ಕೋರ್ಟ್ ಮೆಟ್ಟಿಲೇರಿದ್ದರು.
ನ್ಯಾಯಮೂರ್ತಿಗಳಾದ ಎಸ್.ಎಸ್. ಶಿಂಧೆ ಮತ್ತು ಎಂ.ಎಸ್. ಕಾರ್ನಿಕ್ ಅವರ ವಿಭಾಗೀಯ ಪೀಠವು ಕಂಗನಾ ಮತ್ತು ಅವರ ಸಹೋದರಿ ರಂಗೋಲಿ ಅವರುಗಳು ಜನವರಿ 8 ರಂದು ಪೊಲೀಸರ ಮುಂದೆ ಹಾಜರಾಗಬೇಕೆಂದು ನಿರ್ದೇಶಿಸಿದ್ದು, ಅಲ್ಲಿಯವರೆಗೆ ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಂತೆ ಪೊಲೀಸರಿಗೆ ಸೂಚಿಸಿದೆ.