Friday, August 12, 2022

Latest Posts

ನಟಿ ರಿಯಾ ಚಕ್ರವರ್ತಿ ನ್ಯಾಯಾಂಗ ಬಂಧನ ಅಕ್ಟೋಬರ್ 6ರವರೆಗೆ ವಿಸ್ತರಣೆ

ಮುಂಬೈ: ಬಾಲಿವುಡ್​ ನಟ ಸುಶಾಂತ್ ಸಿಂಗ್​ ರಜಪೂತ್​ ಆತ್ಮಹತ್ಯೆ ಹಾಗೂ ಡ್ರಗ್ಸ್​ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ನಟಿ ರಿಯಾ ಚಕ್ರವರ್ತಿ ನ್ಯಾಯಾಂಗ ಬಂಧನ ವನ್ನು ವಿಶೇಷ ಎನ್ ಡಿಪಿಎಸ್ ನ್ಯಾಯಾಲಯ ಅಕ್ಟೋಬರ್ 6ರವರೆಗೆ ವಿಸ್ತರಿಸಿದೆ.
ರಿಯಾ ನ್ಯಾಯಾಂಗ ಬಂಧನ ಮುಕ್ತಾಯಗೊಂಡ ಕಾರಣ ಹೆಚ್ಚಿನ ವಿಚಾರಣೆಗೋಸ್ಕರ ಮಾದಕ ವಸ್ತು ನಿಯಂತ್ರಣ ಸಂಸ್ಥೆ ಅವರನ್ನ ಮತ್ತಷ್ಟು ವಿಚಾರಣೆಗೆ ಒಳಪಡಿಸಲಿದೆ. ಈ ಮಧ್ಯೆ ಬಾಂಬೆ ಹೈಕೋರ್ಟ್​​ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರಿಂದ ನಾಳೆ ವಿಚಾರಣೆ ನಡೆಯಲಿದೆ.
ಮಾದಕ ದ್ರವ್ಯ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ರಿಯಾ ಚಕ್ರವರ್ತಿ ಯನ್ನು ಎನ್ ಸಿಬಿ ಸೆಪ್ಟೆಂಬರ್ 8ರಂದು ಬಂಧಿಸಿತ್ತು. ಇದಕ್ಕೂ ಮುನ್ನ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಡ್ರಗ್ಸ್​ ಪ್ರಕರಣದಲ್ಲಿ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್​, ಸಾರಾ ಅಲಿ ಖಾನ್​ ಸೇರಿದಂತೆ ಅನೇಕರ ಹೆಸರು ಈಗಾಗಲೇ ಕೇಳಿ ಬಂದಿದ್ದು, ಅವರಿಗೂ ನೋಟಿಸ್​ ಜಾರಿಗೊಳುವ ಸಾಧ್ಯತೆ ದಟ್ಟವಾಗಿದೆ. ಸದ್ಯ ಎನ್​ಸಿಬಿ ವಶದಲ್ಲಿರುವ ರಿಯಾ ಚಕ್ರವರ್ತಿ ವಿಚಾರಣೆ ಮುಂದುವರೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss