Sunday, June 26, 2022

Latest Posts

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಕೇಸ್, ಪ್ರಕರಣದ ಸಿಬಿಐ ತನಿಖೆಗೆ ಒಪ್ಪಿಗೆ, ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನಟ  ಸುಶಾಂತ್  ಸಿಂಗ್  ರಜಪೂತ್  ಸಾವಿನ  ಪ್ರಕರಣ  ತನಿಖೆಯನ್ನು  ಸಿಬಿಐಗೆ  ವಹಿಸುವಂತೆ ಸುಪ್ರೀಂ  ಕೋರ್ಟ್  ತೀರ್ಪು  ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ನಾದಲ್ಲಿ ದಾಖಲಾಗಿದ್ದ ಎಫ್  ಐ ಆರ್ ಅನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ನಟಿ ರಿಯಾ ಚಕ್ರವರ್ತಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ರಿಯಾ ಚಕ್ರವರ್ತಿ ಮತ್ತು ಮುಂಬೈ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿ

ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿದೆ. ಬಿಹಾರ ಪೊಲೀಸರು ಸಲ್ಲಿಸಿದ್ದ ಎಫ್ ಐ ಆರ್ ಕಾನೂನು ಬದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮುಂಬೈ ಪೊಲೀಸರು ತನಿಖೆಗೆ ಸಹರಿಕಬೇಕು, ತನಿಖೆಯ ದಾಖಲೆಗಳನ್ನುಸಿಬಿಐಗೆ ಹಸ್ತಾಂತರಿಸಬೇಕೆಂದು ಸುಪ್ರೀಂ ಕೊರ್ಟ್ ಆದೇಶಿಸಿದೆ. ಸಿಬಿಐ ತನಿಖೆಗೆ ಮುಂಬೈ ಪೊಲೀಸರ ವಿರೋಧವಿತ್ತು. ಸುಪ್ರೀಂ ಕೋರ್ಟ್ ತೀರ್ಪಿನಿಂದ ರಿಯಾ ಮತ್ತು ಮುಂಬೈ ಪೊಲೀಸರಿಗೆ ಹಿನ್ನಡೆಯಾಗಿದೆ. ಈ ಮಹತ್ವದ ತೀರ್ಪು ಸುಶಾಂತ್ ಕುಟುಂಬಕ್ಕೆ ಸಿಕ್ಕ ಮೊದಲ ಜಯವಾಗಿದೆ. ಸುಶಾಂತ್ ಸಾವಿನ ಪ್ರಕರಣದ ತನಿಖೆ ವಿಚಾರದಲ್ಲಿ ಮುಂಬೈ ಪೊಲೀಸರು ಮತ್ತು ಬಿಹಾರ ಪೊಲೀಸರ ನಡುವೆ ಜಟಾಪಟಿ  ನಡೆಯುತ್ತಿತ್ತು. ಬಿಹಾರ ಪೊಲೀಸರು ಸುಪ್ರೀಂ ಕೋರ್ಟಿ ಗೆ ಸಲ್ಲಿಸಿದ ಅರ್ಜಿಯಲ್ಲಿ ಮಹಾರಾಷ್ಟ್ರ ಪೊಲೀಸರು ರಾಜಕೀಯ ಒತ್ತಡದಿಂದ ಎಫ್ ಐ ಆರ್ ದಾಖಲಿಸಿಲ್ಲ. ಬಿಹಾರ ಪೊಲೀಸರಿಗೆ ಯಾವುದೇ ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿದ್ದರು. ೩೪ ವರ್ಷದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಜೂನ್ ೧೪ರಂದು ಮುಂಬೈನ ಬಾಂದ್ರಾ ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಮೇಲ್ನೋಟಕ್ಕೆ ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮುಂಬೈ ಪೊಲೀಸರು ಹೇಳಿದ್ದರು. ಸುಶಾಂತ್ ಸಾವಿನ ಪ್ರಕರಣವನ್ನು ವಿವಿದ ಆಂಗಲ್ ಗಳಲ್ಲಿ ತನಿಖೆ ನಡೆಸುತ್ತಿದ್ದರು. ಇದೀಗ ಸುಶಾಂತ್ ಸಿಂಗ್ ಪ್ರಕರಣ ಸಿಬಿಐ ಅಂಗಳದಲ್ಲಿದೆ.ಶೀಘ್ರದಲ್ಲೇ  ಸಾವಿನ  ಬಗ್ಗೆ  ನಿಜ ಏನು  ಎಂಬುದು  ಗೊತ್ತಾಗಲಿದೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss