ಹೊಸ ದಿಗಂತ ಆನ್ ಲೈನ್ ಡೆಸ್ಕ್:
ನಿನ್ನೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಅವರ ಬೆಂಗಾವಲು ವಾಹನದ ವಾಹನದ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿಗೆ ಸಮನ್ಸ್ ನೀಡಿದೆ.
ಕಲ್ಲು ತೂರಾಟ ನಡೆದ ಕೆಲವೇ ಗಂಟೆಗಳಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಕೇಳಿದ ವರದಿಯೊಂದನ್ನು ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಂಕರ್ ಅವರು ರಾಜ್ಯದ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಸಲ್ಲಿಸಿದ್ದಾರೆ.
ಇದೀಗ ಪಶ್ಚಿಮ ಬಂಗಾಳ ರಾಜ್ಯದಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ರಾಜ್ಯಪಾಲರಿಂದ ವರದಿ ಪಡೆದಿರುವ ಕೇಂದ್ರ ಗೃಹ ಸಚಿವಾಲಯ, ಆ ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಹಾಗೂ ಮುಖ್ಯ ಕಾರ್ಯದರ್ಶಿಗೆ ಸಮನ್ಸ್ ನೀಡಿದೆ.