Monday, August 8, 2022

Latest Posts

ನನಗೆ ಸಚಿವ ಸ್ಥಾನ ಕೊಟ್ಟರೂ, ಕೊಡದಿದ್ದರೂ ಬಿಜೆಪಿಯಲ್ಲಿಯೇ ಇರುತ್ತೇನೆ: ಮುರುಗೇಶ್ ನಿರಾಣಿ

ಮೈಸೂರು: ನನಗೆ ಸಚಿವ ಸ್ಥಾನ ಕೊಟ್ಟರೂ, ಕೊಡಿದಿದ್ದರೂ ಬಿಜೆಪಿಯಲ್ಲಿಯೇ ಇರುತ್ತೇನೆ ಎಂದು ಶಾಸಕ ಮುರುಗೇಶ್ ನಿರಾಣಿ ಹೇಳಿದರು.
ಸೋಮವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವ ಸಂಪುಟ ವಿಸ್ತರಣೆ ಬಗ್ಗೆಯ ತಲೆ ಕೆಡಿಸಿಕೊಂಡಿಲ್ಲ ಎಂದರು.
ನನಗೆ ಸಿಎಂ ಬದಲಾವಣೆ ವಿಚಾರವೇ ಗೊತ್ತಿಲ್ಲ. ಪಕ್ಷದ ಹೈಕಮಾಂಡ್ ಹಾಗೂ ಪಕ್ಷದ ಮುಖಂಡರು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಅದಕ್ಕೆ ನಾನು ಬದ್ಧನಾಗಿರುತ್ತೇನೆ ಎಂದರು.
ನಾನು ಸಚಿವನಾಗಿ ಪಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆ ಪಡೆದಿದ್ದರೆ ಬೇರೆ ಅರ್ಥ ಕಲ್ಪಿಸುತ್ತಿದ್ದರು. ನಾನು ಶಾಸಕನಾಗಿ ೫ ಸಕ್ಕರೆ ಕಾರ್ಖಾನೆ ನಡೆಸುತ್ತಿದ್ದೇನೆ. ಮಂಗಳವಾರ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಪಿಎಸ್‌ಎಸ್‌ಕೆ ಕಾರ್ಖಾನೆ ಪುನಾರಂಭಕ್ಕೆ ಪೂಜೆ ನಡೆಯಲಿದೆ. ಆ.೨೦ರಿಂದ ಕಬ್ಬು ಅರೆಯುವ ಕಾರ್ಯ ಆರಂಭಗೊಳ್ಳಲಿದೆ. ಈ ಮೊದಲಿದ್ದ ಕಾರ್ಮಿಕರೆಲ್ಲ ಮುಂದುವರೆಯಲಿದ್ದಾರೆ. ಯಾರನ್ನೂ ಕೈ ಬಿಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ರೈತರು, ಕಾರ್ಮಿಕರ ಹಿತದೃಷ್ಟಿಯಿಂದ ಕಾರ್ಖಾನೆ ನಡೆಸುತ್ತಿದ್ದೇವೆ. ಮಂಡ್ಯ, ಮೈಸೂರು ಭಾಗದ ಕಾರ್ಮಿಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಈಗ ಕೆ.ಆರ್ ನಗರದ ಶ್ರೀರಾಮ ಸಕ್ಕರೆ ಕಾರ್ಖಾನೆಯ ಗುತ್ತಿಗೆ ಸಿಕ್ಕಿದೆ. ಅಯೋಧ್ಯಾ ರಾಮಮಂದಿರ ಶಂಕು ಸ್ಥಾಪನೆಯಂದೇ ನನಗೆ ಗುತ್ತಿಗೆ ದೊರೆತಿರುವುದು ಸಂತಸ ತಂದಿದೆ ಎಂದರು.ಶ್ರೀರಾಮ ಸಕ್ಕರೆ ಕಾರ್ಖಾನೆಯಲ್ಲಿ ಹೊಸ ಮಿಷನರಿಗಳ ಅಳವಡಿಕೆ ಕಾರ್ಯ ಪ್ರಾರಂಭಿಸಲಿದ್ದೇವೆ. ಇನ್ನು ಒಂದು ವರ್ಷದಲ್ಲಿ ಕಬ್ಬು ಅರೆಯುವ ಕಾರ್ಯ ಪುನಾರಂಭವಾಗಲಿದೆ ಎಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss