Saturday, August 13, 2022

Latest Posts

ನನ್ನ ಮೇಲೆ ಮಾಡಿರುವ ಲೈಂಗಿಕ ಕಿರುಕುಳ ಆರೋಪ ನಿರಾಕರಿಸುತ್ತೇನೆ: ಧನಂಜಯ್ ಮುಂಡೆ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ತಮ್ಮ ಮೇಲೆ ಕೇಳಿ ಬಂದಿರುವ ಲೈಂಗಿಕ ಕಿರುಕುಳ ಆರೋಪವನ್ನು ಮಹಾರಾಷ್ಟ್ರ ಸಚಿವ ಧನಂಜಯ್ ಮುಂಡೆ ನಿರಾಕರಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿದ್ದು, ಲೈಂಗಿಕ ಕಿರುಕುಳ ಆರೋಪ ಮಾಡಿರುವ ಗಾಯಕಿ ಹಾಗೂ ಆಕೆಯ ಸಹೋದರಿ ನನಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ.
ಈ ಕುರಿತು ನಾನು ನವೆಂಬರ್‌ನಲ್ಲಿಯೇ ದೂರು ನೀಡಿದ್ದೆ ಎಂದಿದ್ದಾರೆ.
2003ರವರೆಗೂ ನಾನು ಮಹಿಳೆಯೊಂದಿಗೆ ಸಂಪರ್ಕದಲ್ಲಿದ್ದೆ, ನಮಗೆ ಇಬ್ಬರು ಮಕ್ಕಳಿದ್ದಾರೆ. ಮನೆಯವರೂ ಕೂಡ ನಮ್ಮಿಬ್ಬರ ಸಂಬಂಧವನ್ನು ಒಪ್ಪಿಕೊಂಡಿದ್ದರು ಎಂದು ಧನಂಜಯ್ ಮುಂಡೆಯವರು ಹೇಳಿದ್ದಾರೆ.
ಧನಂಜಯ್ ಅವರು ಸಂಬಂಂಧ ಒಪ್ಪಿಕೊಳ್ಳುತ್ತಿದಂತೆಯೇ ಬಿಜೆಪಿ ಮಹಿಳಾ ಘಟಕದವರು ಸಿಎಂ ಉದ್ಧವ್ ಠಾಕ್ರೆಯವರಿಗೆ ಪತ್ರೆ ಬರೆದಿದ್ದು ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss