ಹಿಂದಿನ ಕಾಲದಲ್ಲಿ ಹಿರಿಯರು ಊಟ ಆದ ತಕ್ಷಣ ಬೆಲ್ಲ ತಿನ್ನುತ್ತಿದ್ದರು. ನಿಮ್ಮ ಮನೆಯಲ್ಲಿ ಅಜ್ಜ, ಅಜ್ಜಿ ಇದ್ದರೆ ನೀವು ಗಮನಿಸಿ. ಆದರೆ ಏಕೆ ಬೆಲ್ಲ ತಿನ್ನುತ್ತಿದ್ದರು ಎಂಬುದು ಹಲವರಿಗೆ ಗೊತ್ತಿಲ್ಲ. ಊಟ ಆದ ತಕ್ಷಣ ಬೆಲ್ಲ ತಿನ್ನುವುದರಿಂದ ನಮ್ಮ ದೇಹಕ್ಕೆ ಬಹಳಷ್ಟು ಲಾಭವಿದೆ. ಹಾಗಾಗಿ ಅವರು ಬೆಲ್ಲ ಸೇವಿಸುತ್ತಿದ್ದರು. ಇಲ್ಲಿ ಬೆಲ್ಲದ ಲಾಭಗಳನ್ನು ವಿವರಿಸಲಾಗಿದೆ.
- ಬೆಲ್ಲವು ಮೂತ್ರಪಿಂಡದಲ್ಲಿರುವ ವಿಷಕಾರಿ ರಾಸಾಯನಿಕಗಳನ್ನು ಹೊರ ಹಾಕಲು ನೆರವಾಗುತ್ತದೆ. ದೇಹದಿಂದ ಪರಿಣಾಮಕಾರಿಯಾಗಿ ವಿಷನಿವಾರಿಸಬೇಕೆಂದಲ್ಲಿ ಬೆಲ್ಲ ತಿನ್ನಿ. ಅದೂ ಊಟದ ನಂತರ.
- ಬೆಲ್ಲ ದೇಹದಲ್ಲಿ ಜೀರ್ಣಕ್ರಿಯೆಗೆ ನೆರವಾಗುವ ಎನ್ಜೈಮ್ಗಳನ್ನು ಸಕ್ರಿಯಗೊಳಿಸುತ್ತದೆ. ಜಠರದ ಚಲನೆಗೆ ನೆರವಾಗಿ ಮಲಬದ್ಧತೆಯಿಂದ ರಕ್ಷಿಸುತ್ತದೆ. ಊಟದ ನಂತರ ಬೆಲ್ಲ ಸೇವಿಸಿದರೆ ಜೀರ್ಣಕ್ರಿಯೆ ಸರಿಯಾಗುತ್ತದೆ.
- ಬೆಲ್ಲದ ಅತೀ ಪ್ರಸಿದ್ಧ ಲಾಭವೆಂದರೆ ರಕ್ತ ಶುದ್ಧೀಕರಣ. ನಿತ್ಯವೂ ಸೀಮಿತ ಪ್ರಮಾಣದಲ್ಲಿ ಸೇವಿಸುವುದರಿಂದ ರಕ್ತ ಶುದ್ಧವಾಗಿ ದೇಹವನ್ನು ಆರೋಗ್ಯವಾಗಿಡುತ್ತದೆ.
- ಬೆಲ್ಲದಲ್ಲಿ ಹಲವು ಆಂಟಿ ಆಕ್ಸಿಡಂಟ್ಗಳು ಮತ್ತು ಲವಣಗಳಾದ ಸತು ಮತ್ತು ಸೆಲೆನಿಯಂ ಇವೆ. ಇವು ಸೋಂಕುಗಳ ವಿರುದ್ಧವೂ ನೆರವಾಗುತ್ತದೆ. ರಕ್ತದಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಏರಿಸಲೂ ಬೆಲ್ಲ ನೆರವಾಗುತ್ತದೆ.
- ಬೆಲ್ಲ ಒಂದು ಅತೀ ಸಹಜವಾದ ದೇಹ ಸ್ವಚ್ಛಗೊಳಿಸುವ ಸಾಧನ. ಹೀಗಾಗಿ ಬೆಲ್ಲ ಸೇವಿಸುವುದು ದೇಹದಿಂದ ಅನಗತ್ಯ ಕಣಗಳನ್ನು ನಿವಾರಿಸುತ್ತದೆ. ಶ್ವಾಸಕೋಶ, ಶ್ವಾಸನಾಳ, ಕರುಳು, ಹೊಟ್ಟೆ ಮತ್ತು ಅನ್ನನಾಳವನ್ನು ಸ್ವಚ್ಛಗೊಳಿಸುತ್ತದೆ.
- ಬೆಲ್ಲ ತಿನ್ನುವುದರಿಂದ ಹಲವು ಪೌಷ್ಠಿಕಾಂಶಗಳನ್ನು ದೇಹಕ್ಕೆ ನೀಡುವ ಕಾರಣ ಋತುಸ್ರಾವದ ಹೊಟ್ಟೆನೋವಿಗೆ ಬೆಲ್ಲ ಪರಿಹಾರ ನೀಡುತ್ತದೆ.