Saturday, August 13, 2022

Latest Posts

ನರಹಂತಕ ಹುಲಿ ಸೆರೆಗೆ ಆಗ್ರಹಿಸಿ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ

ಹೊಸದಿಗಂತ ವರದಿ, ಕೊಡಗು:

ನರಹಂತಕ ಹುಲಿಯನ್ನು ಕೊಲ್ಲುವಂತೆ ಒತ್ತಾಯಿಸಿ ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ ಬೆಳೆಗಾರರು, ರೈತರು ಸೋಮವಾರ ಮಡಿಕೇರಿಯಲ್ಲಿ ಬೖಹತ್ ಪ್ರತಿಭಟನೆ ನಡೆಸಿದರು.

ಕೊಡಗಿನ ಮೂಲೆಮೂಲೆಗಳಿಂದ ಬಂದಿದ್ದ ಪ್ರತಿಭಟನಾಕಾರರು ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಒಂದು ಗಂಟೆಗೂ ಅಧಿಕ ಕಾಲ ರಸ್ತೆ ತಡೆ ನಡೆಸಿದರು. ಇದರಿಂದಾಗಿ ವಾಹನ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ಪರದಾಡುವಂತಾಯಿತು.

ದಕ್ಷಿಣ ಕೊಡಗಿನಲ್ಲಿ ಮನುಜರು ಹಾಗೂ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿರುವ ನಡೆಸುತ್ತಿರುವ ವ್ಯಾಘ್ರನನ್ನು ಗುಂಡಿಕ್ಕಿ ಕೊಲ್ಲುವಂತೆ ಹಿಡಿಯುವಂತೆ ಹಾಗೂ ಉಪಟಳ ನೀಡುತ್ತಿರುವ ಇತರ 7 ಹುಲಿಗಳನ್ನು ಸೆರೆಹಿಡಿಯುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

ಕಳೆದ ಎರಡು ವಾರಗಳಿಂದ ಹುಲಿ ಸೆರೆಗೆ ಕಾರ್ಯಾಚರಣೆ ನಡೆಸಿದರೂ, ಹುಲಿಯನ್ನು ಪತ್ತೆ ಮಾಡಲು ವಿಫಲವಾದ ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಕೊಡಗು ಜಿಲ್ಲಾ ರೈತ ಸಂಘದ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೊಡಗು ಮಾತ್ರವಲ್ಲದ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನಗಳಿಂದಲೂ ರೈತರು ಭಾಗವಹಿಸಿ ಬೆಂಬಲ ಸೂಚಿಸಿದರು.

ರಸ್ತೆ ತಡೆ ಪ್ರತಿಭಟನೆಯ ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು, ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss