Tuesday, August 16, 2022

Latest Posts

ನಳಿನ್ ಕಾರ್ಯ ವೈಖರಿಗೆ ಭೇಷ್ ಭೇಷ್ ಅಂದ್ರು ಸಿಎಂ ಯಡಿಯೂರಪ್ಪ

ಹೊಸದಿಗಂತ ವರದಿ, ಮಂಗಳೂರು:

ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ನಳಿನ್ ಕುಮಾರ್ ಕಟೀಲ್ ಇಷ್ಟು ಲವಲವಿಕೆಯಿಂದ ಜವಾಬ್ದಾರಿಯನ್ನು ನಿರ್ವಹಿಸುತ್ತಾರೆ…ಇಷ್ಟು ಚಾಣಾಕ್ಷರಾಗಿದ್ದಾರೆ ಎಂಬುದು ಗೊತ್ತಿರಲಿಲ್ಲ ಎಂದು ನಳಿನ್ ಅವರ ಕಾರ್ಯವೈಖರಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶ್ಲಾಘಿಸಿದ್ದಾರೆ.

ಮಂಗಳೂರಿನಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯಾಧ್ಯಕ್ಷರಾಗುತ್ತಿದ್ದಂತೆ ಮೂರು ಮೂರು ಬಾರಿ ರಾಜ್ಯವನ್ನು ಸುತ್ತಿ ಕಾರ್ಯಕರ್ತರಲ್ಲಿ ಹುರುಪು ಮೂಡಿಸಿರುವ ನಳಿನ್ ಕುಮಾರ್ ಪಕ್ಷವನ್ನು ಬಲಿಷ್ಠಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವರ ನಡೆ ಅನುಕರಣೀಯವಾದುದು. ಅವರು ಕಾರ್ಯಕರ್ತರಿಗೆ ಸ್ಫೂರ್ತಿಯಾಗಿದ್ದಾರೆ ಎಂದರು.

ನಳಿನ್ ಅವರು ಪ್ರತಿ ಜಿಲ್ಲೆಗೆ ತೆರಳಿ ಪಕ್ಷದ ಪ್ರಮುಖರು, ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ಬಲ ತುಂಬುತ್ತಿರುವುದನ್ನು ಕಂಡಿದ್ದೇನೆ. ಇದು ಅತ್ಯಂತ ಮಹತ್ವಪೂರ್ಣವಾದುದು. ರಾಜ್ಯದ ಎಲ್ಲೆಡೆ ಬಿಜೆಪಿ ಶಕ್ತಿ ಬೆಳೆಯುತ್ತಿದೆ. ಕಾರ್ಯಕರ್ತರು ಮುಂಬರುವ ಚುನಾವಣೆಯಲ್ಲೂ ಗೆಲ್ಲಿಸುವಲ್ಲಿ ಕಾರ್ಯೋನ್ಮುಖವಾಗಬೇಕು ಎಂದ ಮುಖ್ಯಮಂತ್ರಿ ಮಂಗಳೂರಿನಲ್ಲಿ ಬಿಜೆಪಿ ಸಂಘಟನೆ ಬಲಿಷ್ಠವಾಗಿ ಬೆಳೆದಿದೆ. ಕಾರ್ಯಕರ್ತರು ಇದೇ ಉತ್ಸಾಹವನ್ನು ಸದಾ ಉಳಿಸಿಕೊಳ್ಳಬೇಕು ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss