Tuesday, August 16, 2022

Latest Posts

ನವಿಲುತೀರ್ಥ ಅಣೆಕಟ್ಟಿನಿಂದ ಕಾಲುವೆಗಳಿಗೆ ನೀರು ಹರಿಸಿ ಬಾದಾಮಿ ಕ್ಷೇತ್ರದ ಕೆರೆ, ಕಟ್ಟೆಗಳು ಭರ್ತಿಯಾಗುವಂತೆ ಮಾಡಿ: ಸಿದ್ದರಾಮಯ್ಯ

ಬಾಗಲಕೋಟೆ: ನವಿಲುತೀರ್ಥ ಅಣೆಕಟ್ಟಿನಿಂದ ಮಲಪ್ರಭಾ ನದಿಗೆ ನೀರು ಬಿಡುಗಡೆ ಮಾಡುವ ಬದಲಿಗೆ ಕಾಲುವೆಗಳಿಗೆ ನೀರು ಹರಿಸಿ ಬಾದಾಮಿ ಕ್ಷೇತ್ರದ ಕೆರೆ, ಕಟ್ಟೆಗಳು ಭರ್ತಿಯಾಗುವಂತೆ ಮಾಡಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೆಳಗಾವಿ ಸುತ್ತಮುತ್ತ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಇದರಿಂದ ನವಿಲುತೀರ್ಥ ಅಣೆಕಟ್ಟು ಭರ್ತಿಯಾಗುತ್ತಿದೆ.
ಅಲ್ಲಿಂದ ಮಲಪ್ರಭಾ ನದಿಗೆ ಏಕಾಏಕಿ ನೀರು ಹರಿಸಿದರೆ ಪ್ರವಾಹ ಪರಿಸ್ಥಿತಿ ಉಂಟಾಗುತ್ತದೆ. ಇದರಿಂದ ಜನರಿಗೂ ಅನನುಕೂಲವಾಗುತ್ತದೆ.
ಹೀಗಾಗಿ ಮೊದಲು ಕಾಲುವೆಗಳಿಗೆ ನೀರು ಹರಿಸಿದರೆ ಒಣಗಿ ನಿಂತಿರುವ ಕೆರೆ,ಕಟ್ಟೆಗಳು ಭರ್ತಿಯಾಗಿ ಜನ, ಜಾನುವಾರುಗಳಿಗೂ ಅನುಕೂಲವಾಗುತ್ತದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಈ ಬಗ್ಗೆ ಗಮನ ಹರಿಸಿರುವ ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳು ಕಾಲುವೆಗಳಿಗೆ ನಾಳೆಯಿಂದಲೇ ನೀರು ಹರಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss