ಹೊಸದಿಗಂತ ಆನ್ ಲೈನ್ ಡೆಸ್ಕ್:
ಗುಜರಾತ್ ನಲ್ಲಿ ದೀಪಾವಳಿ ರಜೆಯ ಬಳಿಕ ನವೆಂಬರ್ 23 ರಿಂದ ಪ್ರೌಢ ಶಾಲೆಗಳು ಮತ್ತು ಕಾಲೇಜುಗಳನ್ನು ಪುನರಾರಂಭಿಸಲು ಸರ್ಕಾರ ನಿರ್ಧರಿಸಿದೆ ಎಂದು ಗುಜರಾತ್ ಶಿಕ್ಷಣ ಸಚಿವ ಭೂಪೇಂದ್ರಸಿಂಹ ಚುಡಾಸಮಾ ಅವರು ಬುಧವಾರ ತಿಳಿಸಿದ್ದಾರೆ.
ಕೊರೋನಾ ಹರಡುವುದನ್ನು ತಡೆವುದಕ್ಕಾಗಿ ದೇಶಾದ್ಯಂತ ಜಾರಿಗೊಳಿಸಲಾದ ಲಾಕ್ಡೌನ್ ನಿಂದಾಗಿ ಕಳೆದ ಮಾರ್ಚ್ನಿಂದ ಬಂದ್ ಆಗಿರುವ ಶಾಲೆಗಳನ್ನು ಮತ್ತೆ ಆರಂಭಿಸಲಾಗುತ್ತಿದ್ದು, ನವೆಂಬರ್ 23ರಿಂದ 9ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ತರಗತಿಗಳು ಆರಂಭವಾಗಲಿವೆ. ಆದರೆ ಹಾಜರಾತಿ ಕಡ್ಡಾಯವಲ್ಲ ಎಂದು ಸಚಿವರು ಸುದ್ದಿಗಾರರಿಗೆ ಹೇಳಿದ್ದಾರೆ.
ಕೋವಿಡ್ -19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಪ್ರೌಢ ಶಾಲೆ ಮತ್ತು ಕಾಲೇಜುಗಳನ್ನು ಮಾತ್ರ ಮತ್ತೆ ತೆರೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೇಂದ್ರ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ ಕ್ಯಾಂಪಸ್ಗಳು ಕಾರ್ಯನಿರ್ವಹಿಸುತ್ತವೆ. 1 ರಿಂದ 8 ನೇ ತರಗತಿಯ ಪ್ರಾಥಮಿಕ ಶಾಲೆಗಳನ್ನು ತೆರೆಯುವ ನಿರ್ಧಾರವನ್ನು ನಂತರ ತೆಗೆದುಕೊಳ್ಳಲಾಗುವುದುಎಂದು ಚುಡಾಸಮಾ ಹೇಳಿದರು.