Thursday, June 30, 2022

Latest Posts

ನವ ನಿರ್ಮಾಣ ಭಾರತಕ್ಕೆ 20 ಲಕ್ಷ ಕೋಟಿ ರೂ. ಪ್ಯಾಕೇಜ್: ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸ್ವಾಗತ

ಉಡುಪಿ: ಹಲವಾರು ದಿಟ್ಟ ಆರ್ಥಿಕ ಪ್ಯಾಕೇಜ್ ನೀಡುವ ಮೂಲಕ ನವ ನಿರ್ಮಾಣ ಭಾರತಕ್ಕೆ 20 ಲಕ್ಷ ಕೋಟಿ ರೂ. ಪ್ಯಾಕೇಜ್ ನೀಡಿ ಕೊರೋನಾ ಮಹಾಮಾರಿಯಿಂದ ತತ್ತರಿಸಿದ ದೇಶದ ಆರ್ಥಿಕತೆಗೆ ಉತ್ತೇಜನ ನೀಡುವ ಭರವಸೆಯ ಪ್ಯಾಕೇಜ್ ನೀಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಕ್ರಮವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸ್ವಾಗತಿಸಿದ್ದಾರೆ.
ನಾಲ್ಕು ವರ್ಷ ಅವಧಿಗೆ ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳಿಗೆ 3ಲಕ್ಷ ಕೋಟಿ ರೂ.ವರೆಗೆ ಸಾಲ ಸೌಲಭ್ಯ, ನಷ್ಟದಲ್ಲಿರುವ 2 ಲಕ್ಷ ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳಿಗೆ 20,000 ಕೋಟಿ ರೂ. ಆರ್ಥಿಕ ಉತ್ತೇಜನಕ್ಕಾಾಗಿ ಹಣಕಾಸು ಸಾಲ ಒಂದು ವರ್ಷ ಮರುಪಾವತಿಯಿಲ್ಲ. 200 ಕೋಟಿ ರೂ.ವರೆಗೆ ಜಾಗತಿಕ ಟೆಂಡರ್‌ನಲ್ಲಿ ಭಾಗವಹಿಸಲು ಅವಕಾಶ, ಪ್ರಧಾನ ಮಂತ್ರಿ ಜನ್ ಧನ್ ಯೋಜನೆಯಡಿ 500 ರೂ. ನೇರ ಖಾತೆಗೆ ವರ್ಗಾಯಿಸುವ ಯೋಜನೆ ಮುಂದಿನ 3 ತಿಂಗಳು ವಿಸ್ತರಣೆ, ತುರ್ತು ಆರೋಗ್ಯ ಪ್ಯಾಕೇಜ್ ಅಡಿ 15,000 ಕೋಟಿ ರೂ. ಬಿಡುಗಡೆಯಂತಹ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಕುಯಿಲಾಡಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss