ಹೊಸದಿಲ್ಲಿ: ಸಿವಿಲ್ ಸರ್ವೀಸಸ್ ಆಪ್ಟಿಟ್ಯೂಡ್ ಟೆಸ್ಟ್ (ಸಿಎಸ್ಎಟಿ) ನಾಗರಿಕ ಸೇವೆಗಳ ಪ್ರಾಥಮಿಕ ಪರೀಕ್ಷೆಯ ಭಾಗವಾಗಿದ್ದು, ಅದನ್ನು ಕೈಬಿಡುವ ಯೋಚನೆ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ನಾಗರಿಕ ಸೇವಾ ಪರೀಕ್ಷೆಯನ್ನು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ವಾರ್ಷಿಕವಾಗಿ ಮೂರು ಹಂತಗಳಲ್ಲಿ ಅಂದರೆ ಪ್ರಾಥಮಿಕ, ಮುಖ್ಯ ಮತ್ತು ಸಂದರ್ಶನದ ಮೂಲಕ ನಡೆಸುತ್ತದೆ. ಸಿಎಸ್ಎಟಿ ನಾಗರಿಕ ಸೇವೆಗಳ ಪ್ರಾಥಮಿಕ ಪರೀಕ್ಷೆಯ ಭಾಗವಾಗಿದೆ.ಸಿಎಸ್ಎಟಿಯನ್ನು ಕೈಬಿಡಲಾಗುತ್ತದೆಯೇ ಎನ್ನುವ ರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಗೆ ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಪ್ರತಿಕ್ರಿಯಿಸಿ, ಇಲ್ಲ ಎಂದು ಲಿಖಿತ ರೂಪದಲ್ಲಿ ಉತ್ತರಿಸಿದ್ದಾರೆ.