Wednesday, August 10, 2022

Latest Posts

ನಾನು ಪೂರ್ಣ ಗುಣಮುಖನಾಗಿದ್ದೇನೆ, ವೈದ್ಯರಿಗೆ ಧನ್ಯವಾದ: ಸೌರವ್ ಗಂಗೂಲಿ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಲಘು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆಸ್ಪತ್ರೆಯಿಂದ ಡಿಸ್ಚಾರ‍್ಜ್ ಆಗಿದ್ದು, ತಾವು ಸಂಪೂರ್ಣವಾಗಿ ಗುಣಮುಖರಾಗಿದ್ದೇವೆ ಎಂದು ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, ನನಗೆ ಉತ್ತಮ ಚಿಕಿತ್ಸೆ ನೀಡಿದ ಆಸ್ಪತ್ರೆಗೆ ಹಾಗೂ ವೈದ್ಯರಿಗೆ ಧನ್ಯವಾದಗಳು. ನಾನು ಪೂರ್ಣವಾಗಿ ಚೇತರಿಸಿಕೊಂಡಿದ್ದೇನೆ ಎಂದಿದ್ದಾರೆ.
ವ್ಯಾಯಾಮ ಮಾಡುತ್ತಿದ್ದ ವೇಳೆ ಗಂಗೂಲಿ ಅವರಿಗೆ ಲಘು ಹೃದಯಾಘಾತವಾಗಿದ್ದು, ಆಂಜಿಯೋಪ್ಲಾಸ್ಟಿ ನಡೆಸಿ ಒಂದು ಕಡೆ ಸ್ಟಂಟ್ ಅಳವಡಿಸಲಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss