Saturday, October 4, 2025

ನಾನು ಮೆರಿಟ್‌ ಸ್ಟೂಡೆಂಟ್‌ ಸರ್‌, ಪ್ಲೀಸ್‌ ಶಿಕ್ಷೆ ಕಮ್ಮಿ ಮಾಡಿ ಎಂದು ಬಿಕ್ಕಿ ಬಿಕ್ಕಿ ಅತ್ತಿದ್ದ ಪ್ರಜ್ವಲ್‌ ರೇವಣ್ಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮನೆಗೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ದೋಷಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಶಿಕ್ಷೆ ಪ್ರಕಟಕ್ಕೂ ಮುನ್ನ ಪ್ರಜ್ವಲ್‌ಗೆ ಪ್ರಶ್ನೆಗಳು ಎದುರಾಗಿದ್ದು, ಈ ವೇಳೆ ನಾನು ವಿದ್ಯಾವಂತ, ಮೆರಿಟ್‌ ಸ್ಟೂಡೆಂಟ್‌, ನನ್ನ ಹಿಸ್ಟರಿ ನೋಡಿ ನಾನು ಏನು ತಪ್ಪು ಮಾಡಿಲ್ಲ. ದಯವಿಟ್ಟು ಆದಷ್ಟು ಕಡಿಮೆ ಶಿಕ್ಷೆ ಕೊಡಿ ಎಂದು ಪ್ರಜ್ವಲ್‌ ಬಿಕ್ಕಿ ಬಿಕ್ಕಿ ಕೋರ್ಟ್‌ನಲ್ಲಿ ಅತ್ತಿದ್ದರು.

ಕೆ.ಆರ್ ನಗರದಲ್ಲಿ ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ಶಿಕ್ಷೆ ಪ್ರಮಾಣ ಕುರಿತು ಸರ್ಕಾರಿ ಪರ ವಕೀಲರಾಗಿ ಎನ್. ಜಗದೀಶ್, ಅಶೋಕ್ ನಾಯಕ್ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲ ನಳಿನಿ ಮಾಯಾಗೌಡ ಅವರು ವಾದ ಪ್ರತಿವಾದ ಮಂಡಿಸಿದರು. ವಾದ ಪ್ರತಿವಾದದ ಬಳಿಕ ನ್ಯಾ. ಗಜಾನನ ಭಟ್‌ ಅವರ ಪೀಠ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದೆ.