Wednesday, August 17, 2022

Latest Posts

ನಾಲ್ಕನೇ ದಿನದಾಟದ ಅಂತ್ಯಕ್ಕೆ ಟೀಂ ಇಂಡಿಯಾ 2/98 ರನ್: ಗೆಲ್ಲಲು ಬೇಕು 309 ರನ್

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದ ಅಂತ್ಯಕ್ಕೆ ಟೀಂ ಇಂಡಿಯಾ 2 ವಿಕೆಟ್ ಕಳೆದುಕೊಂಡು 98 ರನ್ ಗಳಿಸಿದೆ.
ಆಸ್ಟ್ರೇಲಿಯಾ ದ್ವಿತೀಯ ಇನ್ನಿಂಗ್ಸ್​​ನಲ್ಲಿ 312 ರನ್​ಗಳಿಸಿ ಡಿಕ್ಲೇರ್​ ಮಾಡಿದ ನಂತರ ಗೆಲ್ಲಲು 407 ರನ್​ಗಳ ಕಠಿಣ ಗುರಿ ಪಡೆದ ಭಾರತ ತಂಡಕ್ಕೆ ರೋಹಿತ್ ಶರ್ಮಾ ಮತ್ತು ಶುಬ್ಮನ್ ಗಿಲ್ ಉತ್ತಮ ಆರಂಭ ಒದಗಿಸಿದರು.
ಕಳೆದ ಇನ್ನಿಂಗ್ಸ್​ನಲ್ಲಿ ಅರ್ಧಶತಕ ಸಿಡಿಸಿ ಭರವಸೆ ಮೂಡಿಸಿದ್ದ ಶುಬ್ಮನ್ ಗಿಲ್ 31 ರನ್ ಗಳಿಸಿ ಹೆಜಲ್​ವುಡ್​ಗೆ ವಿಕೆಟ್ ಒಪ್ಪಿಸಿದರು.
ಪೂಜಾರ ಜೊತೆ ಕೂಡಿ ಉತ್ತಮವಾಗಿ ಬ್ಯಾಟ್ ಬೀಸಿದ ರೋಹಿತ್ ಶರ್ಮಾ ಅರ್ಧಶತಕ ಸಿಡಿಸಿದರು. ಆದರೆ ಕಮ್ಮಿನ್ಸ್ ಎಸೆತದಲ್ಲಿ ಸಿಕ್ಸರ್ ಸಿಡಿಸಲು ಯತ್ನಿಸಿ ಸ್ಟಾರ್ಕ್​ಗೆ ಕ್ಯಾಚ್​ ನೀಡಿ ನಿರಾಸೆ ಅನುಭವಿಸಬೇಕಾಯಿತು.
ಅಂತಿಮವಾಗಿ ನಾಲ್ಕನೇ ದಿನದಾಟದ ಅಂತ್ಯಕ್ಕೆ ಭಾರತ 2 ವಿಕೆಟ್ ಕಳೆದುಕೊಂಡು 98 ರನ್ ಗಳಿಸಿದ್ದು, ಪಂದ್ಯ ಗೆಲ್ಲಲು ಇನ್ನೂ 309 ರನ್​ಗಳ ಅವಶ್ಯಕತೆ ಇದೆ. ಪೂಜಾರ 9 ಮತ್ತು ರಹಾನೆ 4 ರನ್ ಗಳಿಸಿ ಅಂತಿಮ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!