Thursday, August 18, 2022

Latest Posts

ನಾಲ್ಕು ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳ ಗೆಲುವು ನಿಶ್ಚಿತ: ಸಿಎಂ ಯಡಿಯೂರಪ್ಪ ವಿಶ್ವಾಸ

ಹೊಸ ದಿಗಂತ ವರದಿ, ಶಿವಮೊಗ್ಗ :

ಒಂದು ಲೋಕಸಭಾ ಹಾಗೂ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ನಡೆಯಲಿದ್ದು, ಚುನಾವಣೆ ಘೋಷಣೆಯಾಗುತ್ತಿದ್ದಂತೆ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮ ಗೊಳಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಹೇಳಿದರು.
ಸೋಮವಾರ ಎನ್‌ಡಿವಿ ಹಾಸ್ಟೆಲ್ ಶಂಕುಸ್ಥಾಪನೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೇರೆ ಬೇರೆ ರಾಜ್ಯಗಳ ಚುನಾವಣೆ ನಡೆಯಲಿದ್ದು ಅವುಗಳ ಜತೆಗೆ ರಾಜ್ಯದ ಉಪಚುನಾವಣೆ ಕೂಡ ನಡೆಯಲಿದೆ. ಇದಕ್ಕಾಗಿ ರಾಜ್ಯಾಧ್ಯಕ್ಷರು ತಯಾರಿ ನಡೆಸಿದ್ದಾರೆ ಎಂದರು.
ಈಗಾಗಲೇ ಆಯಾ ಕ್ಷೇತ್ರಗಳಿಗೆ ಉಸ್ತುವಾರಿಗಳನ್ನು ಅಧ್ಯಕ್ಷರು ನೇಮಿಸಿದ್ದಾರೆ. ನಾಲ್ಕು ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, ಕೋವಿಡ್ 2ನೇ ಹಂತದ ಲಸಿಕೆ ಅಭಿಯಾನ ಆರಂಭವಾಗಿದೆ. ಪ್ರಧಾನಿ ಕೂಡ ಲಸಿಕೆ ಪಡೆದಿದ್ದಾರೆ. ವಯೋಮಿತಿ ನಿಗದಿ ಮಾಡಿರುವ ಎಲ್ಲರೂ ಲಸಿಕೆ ಪಡೆಯುವಂತೆ ಮನವಿ ಮಾಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!