Wednesday, July 6, 2022

Latest Posts

ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಯಲ್ಲಿ ಬಿರುಕು; ಪುರಾತತ್ವ ತಜ್ಞರ ತಂಡದಿಂದ ಪರಿಶೀಲನೆ

ಮೈಸೂರು: ನಗರದ ಕೆ.ಆರ್ ವೃತ್ತದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಯಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪುರಾತತ್ವ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರತಿಮೆ ಪರಿಶೀಲಿಸಿದ ಇತಿಹಾಸ ತಜ್ಞ ಡಾ.ರಂಗರಾಜು, ನಗರದ ಪ್ರಮುಖ ಜಾಗದಲ್ಲಿ ಪ್ರತಿಮೆ ಇದ್ದು, ಇಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ. ಹೀಗಾಗಿ ಪ್ರತಿಮೆ ಹಾಳಾಗುತ್ತಿದೆ. ಕಲ್ಲಿನಲ್ಲಿರುವ ದೋಷದಿಂದ ಸಣ್ಣ ಪ್ರಮಾಣದ ಬಿರುಕು ಕಂಡಿದೆ ಎಂದು ತಿಳಿಸಿದರು.

ಪ್ರತಿಮೆಯಲ್ಲಿ ಕತ್ತಿನ ಭಾಗಕ್ಕೆ ಬಳಸಿರುವ ಶಿಲೆ ಉತ್ತಮ ಗುಣಮಟ್ಟದ್ದಲ್ಲ. ಹೀಗಾಗಿ ಮುಖ ಹಾಗೂ ಕುತ್ತಿಗೆಯ ಭಾಗದಲ್ಲಿ ಬಿರುಕು ಕಾಣಿಸಿಕೊಂಡಿದೆ. ಸದ್ಯ ಪ್ರತಿಮೆಯಲ್ಲಿ ಸಣ್ಣ ಬಿರುಕು ಇರುವುದರಿಂದ ಯಾವುದೇ ತೊಂದರೆ ಇಲ್ಲ. ಮಳೆಗಾಲದೊಳಗಾಗಿ ಪ್ರತಿಮೆ ಸಂರಕ್ಷಣೆ ಮಾಡುವುದು ಒಳಿತು ಎಂದು ಪುರಾತತ್ವ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಈ ಪ್ರತಿಮೆಯನ್ನು ಅಮೃತ ಶಿಲೆಯಲ್ಲಿ ನಿರ್ಮಿಸಲಾಗಿದ್ದು, ನಾಲ್ವಡಿ ಕೃಷ್ಣರಾಜ ಒಡೆಯರ್ ನೆನಪಿನಾರ್ಥವಾಗಿ ಸರ್ ಎಂ. ವಿಶ್ವೇಶ್ವರಯ್ಯನವರು ಉದ್ಘಾಟಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss