Friday, August 19, 2022

Latest Posts

ನಾಳೆಯಿಂದ ಪಂಜಾಬ್​ ನಲ್ಲಿ ಶಾಲಾ-ಕಾಲೇಜು​ ಆರಂಭ

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶಾದ್ಯಂತ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದು, ವಿವಿಧ ರಾಜ್ಯಗಳಲ್ಲಿ ಶಾಲಾ-ಕಾಲೇಜು ಆರಂಭಗೊಂಡಿವೆ. ಇದೀಗ ಪಂಜಾಬ್​ನಲ್ಲೂ ನಾಳೆಯಿಂದ ಶಾಲಾ-ಕಾಲೇಜುಗಳು ಪುನಾರಂಭಗೊಳ್ಳಲಿವೆ.
5ನೇ ತರಗತಿಯಿಂದ 12ನೇ ತರಗತಿವರೆಗಿನ ಶಾಲಾ-ಕಾಲೇಜು​ ಆರಂಭ ಮಾಡಲಾಗುವುದು ಎಂದು ಸುತ್ತೋಲೆ ಹೊರಡಿಸಲಾಗಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಶಾಲಾ-ಕಾಲೇಜು​ ಕಾರ್ಯಾರಂಭ ಮಾಡಲಿವೆ ಎಂದು ಅಲ್ಲಿನ ಶಿಕ್ಷಣ ಸಚಿವ ವಿಜಯ್​ ಇಂದಿರಾ ಸಿಘಲ್​ ತಿಳಿಸಿದ್ದಾರೆ.
ಕರ್ನಾಟಕ, ಕೇರಳ ಹಾಗೂ ಆಂಧ್ರಪ್ರದೇಶ ಸೇರಿದಂತೆ ಈಗಾಗಲೇ ಅನೇಕ ರಾಜ್ಯಗಳಲ್ಲಿ ಶಾಲಾ-ಕಾಲೇಜುಗಳು ಪುನಾರಂಭಗೊಂಡಿದ್ದು, ವಿದ್ಯಾರ್ಥಿಗಳು ಎಂದಿನಂತೆ ಶಾಲೆಗೆ ತೆರಳುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!