ಹೊಸದಿಗಂತ ಆನ್ ಲೈನ್ ಡೆಸ್ಕ್:
ಭಾರತದ ಬಹುನಿರೀಕ್ಷಿತ ಅತ್ಯಾಧುನಿಕ ಅರ್ಜುನ್ ಎಂಕೆ-1ಎ ಯುದ್ಧ ಟ್ಯಾಂಕ್ ನಾಳೆ ತಮಿಳುನಾಡಿನ ಚೆನ್ನೈನಲ್ಲಿ ಸೇನೆಗೆ ಸಮರ್ಪಣೆಯಾಗಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಎಂಕೆ-1ಎ ಯುದ್ದ ಟ್ಯಾಂಕ್ ನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ಜಿ. ಸತೀಶ್ ರೆಡ್ಡಿ ತಿಳಿಸಿದ್ದಾರೆ.
ಈ ಮೂಲಕ ಸೇನೆಗೆ ದೊಡ್ಡ ಪ್ರಮಾಣದಲ್ಲಿ ಉತ್ತೇಜನ ಮತ್ತು ಪ್ರೋತ್ಸಾಹ ಸಿಗಲಿದೆ. ಇದು ಭಾರತವನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಒಂದು ಹೆಜ್ಜೆಯಾಗಿದೆ ಎಂದು ಅವರು ಹೇಳಿದ್ದಾರೆ.
118 ಅರ್ಜುನ್ ಟ್ಯಾಂಕ್ ಗಳನ್ನು ನಿರ್ಮಿಸಿ ಕೊಡುವಂತೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗೆ 8500 ಕೋಟಿ ಮೊತ್ತದ ಆರ್ಡರ್ ನೀಡಲಾಗಿದೆ ಎಂದು ಜಿ. ಸತೀಶ್ ರೆಡ್ಡಿ ತಿಳಿಸಿದ್ದಾರೆ.