Thursday, August 11, 2022

Latest Posts

ನಾಳೆಯಿಂದ ಹಾವೇರಿ ಜಿಲ್ಲೆಯ ಪ್ರವಾಸಿ ತಾಣಗಳು , ಎಲ್ಲಾ ಉದ್ಯಾನವನಗಳ ಪುನರಾರಂಭ

ಹಾವೇರಿ: ಜಿಲ್ಲೆಯ ಪ್ರವಾಸಿ ತಾಣಗಳು ಹಾಗೂ ಎಲ್ಲ ತರಹದ ಉದ್ಯಾನವನಗಳ ಪುನರಾರಂಭಕ್ಕೆ ಕೇಂದ್ರ ಗೃಹ ಮಂತ್ರಾಲಯದ ಕೋವಿಡ್-೧೯ ನಿರ್ದೇಶನಗಳು ಹಾಗೂ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಸ್.ಒ.ಪಿ. ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳ್ಳಪಟ್ಟು ವಿಶ್ವ ಪ್ರವಾಸೋದ್ಯಮ ದಿನಾಚರಣೆ ದಿನ ಸೆ.27 ರಿಂದ ಅನುಮತಿ ನೀಡಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಆದೇಶ ಹೊರಡಿಸಿದ್ದಾರೆ.
ಕೋವಿಡ್-19 ಪಿಡುಗಿನಿಂದ ಕುಂಠಿತಗೊಂಡಿರುವ ಪ್ರವಾಸೋದ್ಯಮ ಕ್ಷೇತ್ರವನ್ನು ಹಂತ ಹಂತವಾಗಿ ಸುಧಾರಿಸಲು ಹಾಗೂ ಉತ್ತೇಜಿಸಲು ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಿ ಜಿಲ್ಲೆಯ ಪ್ರವಾಸಿ ತಾಣಗಳು ಹಾಗೂ ಎಲ್ಲ ತರಹದ ಉದ್ಯಾನವನಗಳು ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಷರತ್ತಿಗೊಳಪಟ್ಟು ಅನುಮತಿ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss